ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯ ಕುರಿತು ನಡೆಯುತ್ತಿರುವ ಚರ್ಚೆಗಳಿಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ನಾನು ಯಾವಾಗಲೂ ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿರುವುದಾಗಿ ಹೇಳಿದ್ದಾರೆ.
ಪ್ರದೇಶ ಕಾಂಗ್ರೆಸ್ ಸಮಿತಿಗೆ 2013ರಲ್ಲಿ ಅಧ್ಯಕ್ಷನಾಗಿದ್ದಾಗ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದೇವೆ. ಆ ಸಂದರ್ಭದಲ್ಲಿ ನಾನು ಚುನಾವಣೆಯಲ್ಲಿ ಪರಾಭವಗೊಂಡಿದ್ದರಿಂದ ಸಿಎಂ ಆಗುವ ಅವಕಾಶ ತಪ್ಪಿತ್ತು. ಸಿಎಂ ಕುರ್ಚಿ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪರಮೇಶ್ವರ್ ತಿಳಿಸಿದರು.
ಕರ್ನಾಟಕದ ರಾಜಕಾರಣವನ್ನು ಖರ್ಗೆಯವರು 50 ವರ್ಷಗಳ ಸುದೀರ್ಘ ಅನುಭವದೊಂದಿಗೆ ಚೆನ್ನಾಗಿ ಬಲ್ಲವರಾಗಿರುವುದರಿಂದ, ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಹಿಂದಿರುಗಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

