ಚಂದ್ರವಳ್ಳಿ ನ್ಯೂಸ್, ಕನಕಪುರ:
ಮುಖ್ಯಮಂತ್ರಿ ಪಟ್ಟಕ್ಕಾಗಿ ಕಾಂಗ್ರೆಸ್ನಲ್ಲಿ ತೀವ್ರ ಸ್ವರೂಪ ತಂತ್ರ ಪ್ರತಿ ತಂತ್ರಗಳು ನಡೆಯುತ್ತಿ ಪಡೆದುಕೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಣ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳು ನಿತ್ಯ ತಂತ್ರ ಪ್ರತಿತಂತ್ರ ಹಣೆಯುತ್ತಿದ್ದು ಪಕ್ಷದಲ್ಲಿ ಸಾಕಷ್ಟು ಗೊಂದಲ ಮೂಡಿದೆ.
ನಾವು ಯಾರ ಬಣಕ್ಕೆ ಜಂಪ್ ಮಾಡಿದರೆ ನಮಗೆ ಭವಿಷ್ಯದಲ್ಲಿ ಅನುಕೂಲ ಆಗಲಿದೆ ಎನ್ನುವ ಗೊಂದಲದಲ್ಲಿ ಶಾಸಕರಿದ್ದಂತೆ ಕಾಣುತ್ತಿದೆ.
ಆದರೂ ಡಿಕೆ ಶಿವಕುಮಾರ್ ಬಣದಲ್ಲಿ 70ಕ್ಕೂ ಹೆಚ್ಚಿನ ಶಾಸಕರು ಬೆಂಬಲ ನೀಡಿರುವ ಕುರಿತು ಸುದ್ದಿಗಳು ಹರಡಿವೆ.
ಈ ನಡುವೆ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದು, ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತಾ ನಾನು ಕೇಳಿಯೇ ಇಲ್ಲ ಎಂದು ಒಂದು ಕಡೆ ಹೇಳಿದರೆ, ಕನಕಪುರದಲ್ಲಿ ಮಾತನಾಡಿರುವ ಅವರು, ಸಿಎಂ ಸ್ಥಾನ ಹಸ್ತಾಂತರ ಐದಾರು ಜನರ ಮಧ್ಯ ನಡೆದಿರುವ ಗುಟ್ಟಿನ ವಿಚಾರ. ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರೋದಕ್ಕೆ ನನಗೆ ಇಷ್ಟವಿಲ್ಲ.
ಪಕ್ಷ ಇದ್ದರೆ ನಾವೆಲ್ಲ, ಪಕ್ಷವನ್ನು ನಾನು ವೀಕ್ ಮಾಡುವುದಿಲ್ಲ ಎಂದು ಡಿಸಿಎಂ ಶಿವಕುಮಾರ್ ಹೇಳಿದ್ದಾರೆ. ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತೇನೆ ಅಂದಿದ್ದಾರೆ, ಮಂಡಿಸಲಿ. ಅವರು ವಿಪಕ್ಷ ನಾಯಕರಾಗಿಯೂ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಎಲ್ಲಿ ಶ್ರಮವಿದೆಯೋ ಅಲ್ಲಿ ಫಲವಿದೆ ಎಂದು ಡಿಕೆಶಿವಕುಮಾರ್ ಮಾರ್ಮಿಕವಾಗಿ ಹೇಳಿದ್ದಾರೆ.
ಕಾಂಗ್ರೆಸ್ ಮುಖಂಡ ರಾಯರೆಡ್ಡಿ, ಬಿಜೆಪಿ ಮುಖಂಡ ಡಿವಿ ಸದಾನಂದಗೌಡ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ನಾನು ಅವರ ವಕ್ತಾರ ಅಲ್ಲ ಎಂದು ಇದೇ ವೇಳೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

