ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಎಲ್ಲೂ ಹೇಳಿಲ್ಲ- ಡಿಸಿಎಂ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾನು ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಬಂದಿದೆ ಎಂದು ಎಲ್ಲೂ ಹೇಳಿಲ್ಲ. ಆದರೆ ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು ತಿರುಚಿ ವರದಿ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಬೇಸರ ತಂದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

ಸಿಎಂ ಸೇರಿದಂತೆ ಯಾವುದೇ ಹುದ್ದೆಗಾಗಿ ನಾನು ಆತುರದಲ್ಲಿಲ್ಲ. ರಾಜ್ಯದ ಜನರ ಸೇವೆ ಮತ್ತು ಬೆಂಗಳೂರು ನಾಗರಿಕರಿಗೆ ಉತ್ತಮ ಆಡಳಿತ ನೀಡುವುದೇ ನನ್ನ ಉದ್ದೇಶ ಎಂದು ಶಿವಕುಮಾರ್ ತಿಳಿಸಿದರು.

- Advertisement - 

ಸಾರ್ವಜನಿಕರ ಸೇವೆಗಾಗಿಯೇ ಹಗಲು-ರಾತ್ರಿ ನಾನು ಶ್ರಮಿಸುತ್ತಿದ್ದೇನೆ. ಸತ್ಯ ತಿರುಚಿ, ದಾರಿ ತಪ್ಪಿಸುವ ವರದಿಗಳಿಂದ ದೂರವಿರುವಂತೆ ಮಾಧ್ಯಮಗಳ ಸ್ನೇಹಿತರಲ್ಲಿ ಡಿಸಿಎಂ ಶಿವಕುಮಾರ್ ಮನವಿ ಮಾಡಿದರು.

 

- Advertisement - 

 

Share This Article
error: Content is protected !!
";