ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಾಕ್ ಸ್ವಾತಂತ್ರ್ಯದ ಬಗ್ಗೆ ಬುರುಡೆ ಭಾಷಣ ಬಿಡುವ ಕರ್ನಾಟಕ ಕಾಂಗ್ರೆಸ್ ನಾಯಕರು ತಮ್ಮ ವಿರುದ್ಧ ದನಿ ಎತ್ತಿದರೆ ತುರ್ತುಪರಿಸ್ಥಿಯ ದಿನಗಳನ್ನು ನೆನಪಿಸುವಂತೆ ನಡೆದುಕೊಳ್ಳುತ್ತಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದವರ ಬಂಧನ ಇಲ್ಲ. ಪಾಕಿಸ್ತಾನ ಧ್ವಜ ಹಾರಿಸುವವರ ಬಂಧನ ಇಲ್ಲ. ಆದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನಾಡಿದರೆ ಕೂಡಲೇ ಕೇಸು, ಜೈಲು, ಕಿರುಕುಳ ನೀಡಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ನವರೇ, ನಿಮ್ಮ ಸರ್ವೋಚ್ಚ ನಾಯಕ ರಾಹುಲ್ ಗಾಂಧಿ ಅವರು ಹೋದಲ್ಲೆಲ್ಲ ಹಾದಿ ಬೀದಿಯಲ್ಲಿ ಪ್ರದರ್ಶನ ಮಾಡುವ ಸಂವಿಧಾನ ಪುಸ್ತಕದಲ್ಲಿ ನಾಗರೀಕರಿಗೆ ವಾಕ್ ಸ್ವಾತಂತ್ರ್ಯ ಇಲ್ಲವೇ? ನಾಚಿಕೆಯಾಗಬೇಕು ಭಾರತೀಯ ಕಾಂಗ್ರೆಸ್ ಪಕ್ಷದ ಆಷಾಢಭೂತಿತನಕ್ಕೆ ಸಾಕ್ಷಿಯಾಗಿದೆ. ಇದೊಂದು ಹಿಟ್ಲರ್ ಸರ್ಕಾರ ಎಂದು ಅಶೋಕ್ ಆರೋಪಿಸಿದ್ದಾರೆ.

