ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಲ್ಲಾ ವಿಷಯಗಳಿಗೂ ಮೂಗು ತೂರಿಸಿ ಮಾತನಾಡುವ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ತನ್ನ ಇಲಾಖೆಯನ್ನೇ ಸಂಪೂರ್ಣವಾಗಿ ಮರೆತುಬಿಟ್ಟಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಹಿಪ್ಪರಗಿ ಬ್ಯಾರೇಜ್‌ಗೇಟ್‌ಕೊಚ್ಚಿ ಹೋಗಿ 6 ಟಿಎಂಸಿಗೂ ಅಧಿಕ ಪ್ರಮಾಣದ ನೀರು ಹರಿದು ಹೋಗುತ್ತಿದೆ.
2024ರ ಆಗಸ್ಟ್‌ನಲ್ಲಿ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದು, ಸುಮಾರು 40 ಟಿಎಂಸಿ ನೀರು ಪೋಲಾಗಿತ್ತು. ಇನ್ನೂ ಸಹ ಅಲ್ಲಿನ ಗೇಟ್‌ಗಳನ್ನು ಸಂಪೂರ್ಣವಾಗಿ ದುರಸ್ತಿ ಮಾಡಿಲ್ಲ.
ಜಲಾಶಯಗಳ ನಿರ್ವಹಣೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಅಪಾರ ಪ್ರಮಾಣದಲ್ಲಿ ಅತ್ಯಮೂಲ್ಯ ಜೀವ ಜಲ ಪೋಲಾಗುತ್ತಿದೆ.
ಡಿಕೆ ಶಿವಕುಮಾರ್ ಅವರೇ, ಜಲಸಂಪನ್ಮೂಲ ಖಾತೆಯನ್ನು ನಿಮ್ಮ ಕೈಯಲ್ಲಿ ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗದಿದ್ದರೇ ರಾಜೀನಾಮೆ ಕೊಡಿ ಎಂದು ಜೆಡಿಎಸ್ ಆಗ್ರಹಿಸಿದೆ.

