ಸಿದ್ದರಾಮಯ್ಯಗೆ ಸ್ವಾಭಿಮಾನ ಇದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ

News Desk

ಚಂದ್ರವಳ್ಳಿ ನ್ಯೂಸ್, ಹಾವೇರಿ:
ಸಿಎಂ ಸಿದ್ದರಾಮಯ್ಯರಿಗೆ ಸ್ವಾಭಿಮಾನ ಇದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬುಧವಾರ ಲೋಕಾಯುಕ್ತ ವಿಚಾರಣೆ ಎದುರಿಸಲಿ ಎಂದು ಹಾವೇರಿ ಶಿಗ್ಗಾಂವಿ ಮತಕ್ಷೇತ್ರ ಹುಲುಗೂರಿನಲ್ಲಿ ಮಾಜಿ ಸಚಿವ ಶ್ರೀರಾಮುಲು ಆಗ್ರಹ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀರಾಮುಲು ಅವರು, ಸಿಎಂಗೆ ಸ್ವಾಭಿಮಾನ ಇದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನವೆಂಬರ್-6 ರಂದು ಲೋಕಾಯುಕ್ತ ವಿಚಾರಣೆ ಎದುರಿಸಲಿ ಎಂದು ಅವರು ತಾಕೀತು ಮಾಡಿದರು.
ಮುಖ್ಯಮಂತ್ರಿಗಳ ಆಡಳಿತ ವ್ಯಾಪ್ತಿಗೆ ಲೋಕಾಯುಕ್ತ ಬರುತ್ತದೆ.

ಅವರ ಕೈ ಕೆಳಗಿನ ಅಧಿಕಾರಿಗಳು ಅವರನ್ನು ವಿಚಾರಣೆ ಮಾಡಬೇಕು. ಹೀಗಾಗಿ ನ್ಯಾಯ ಸಮ್ಮತವಾದ ತನಿಖೆ ಆಗುವ ನಂಬಿಕೆಯಿಲ್ಲ. ಆ ಕಾರಣದಿಂದ ಸಿಬಿಐಗೆ ವಿಚಾರಣೆ ನೀಡುವಂತೆ ಬಿಜೆಪಿ ಒತ್ತಾಯ ಮಾಡುತ್ತಿದೆ ಎಂದು ಅವರು ತಿಳಿಸಿದರು.

ರಾಜ್ಯ ಸರ್ಕಾರ ಭಯದಿಂದ ತಮ್ಮ ಯಾವುದೇ ಹಗರಣಗಳನ್ನು ಸಿಬಿಐಗೆ ನೀಡುತ್ತಿಲ್ಲ. ಸಿಬಿಐ ರಾಜ್ಯ ಪ್ರವೇಶಕ್ಕೆ ಬಿಡುತ್ತಿಲ್ಲ. ಉಪಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಹೇಳಿದರು.

 

- Advertisement -  - Advertisement -  - Advertisement - 
Share This Article
error: Content is protected !!
";