ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ಸ್ವೀಕರಿದ್ದ ಪವನ್ ನೆಜ್ಜೂರ್ ಅವರನ್ನು, ಒಂದೇ ದಿನಕ್ಕೆ ಏಕಾಏಕಿ ಅಮಾನತುಗೊಳಿಸಿರುವ ಸಿದ್ದರಾಮಯ್ಯ ಅವರ ಸರ್ಕಾರದ ನಡೆ ಖಂಡನೀಯ ಎಂದು ಜೆಡಿಎಸ್ ಟೀಕಿಸಿದೆ.
ಬಳ್ಳಾರಿಯನ್ನು ರಿಪಬ್ಲಿಕ್ ಮಾಡಿಕೊಂಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ, ತನ್ನ ಪಕ್ಷದ ಶಾಸಕರ ರಕ್ಷಿಸಲು, ಅವರ ಗೂಂಡಾಗಿರಿಯನ್ನು ಮುಚ್ಚಿಹಾಕಲು ಪೊಲೀಸ್ ಅಧಿಕಾರಿಯನ್ನು ಬಲಿಪಶು ಮಾಡಿದೆ ಎಂದು ಜೆಡಿಎಸ್ ಆರೋಪಿಸಿದೆ.
ಬಳ್ಳಾರಿಯಲ್ಲಿ ಫ್ಲೆಕ್ಸ್ ವಿಚಾರಕ್ಕೆ ಗುರುವಾರ ಸಂಜೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಆತನ ಗೂಂಡಗಳ ಅಟ್ಟಹಾಸಕ್ಕೆ ಓರ್ವನ ಬಲಿಯಾಗಿತ್ತು. ಗಲಾಟೆಗೆ ಕಾರಣರಾದ ಶಾಸಕರ ವಿರುದ್ಧ ಕ್ರಮ ಕೈಗೊಳ್ಳದೆ, ಅಸಲಿ ತಪ್ಪಿತಸ್ಥರನ್ನು ಬಿಟ್ಟು, ಎಸ್‌ಪಿಗೆ ಮಾತ್ರ ಶಿಕ್ಷೆ ! ಅಧಿಕಾರಿಗಳ ಮೇಲೆ ಸವಾರಿ ಮಾಡುವುದು ಯಾವ ನ್ಯಾಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರೇ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

