ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ಎಂದು ಘೋಷಣೆ ಕೂಗಿದಾಗಲೇ ಕಾಂಗ್ರೆಸ್‌ಸರ್ಕಾರ ಕಠಿಣ ಕ್ರಮ ವಹಿಸಿದ್ದರೆ ಈಗ ಹಿಂದೂ ಕಾರ್ಯಕರ್ತ ಸುಹಾಸ್‌ಶೆಟ್ಟಿಯ ಹತ್ಯೆ ಆಗುತ್ತಿರಲಿಲ್ಲ ಎಂದು ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾಲಹಳ್ಳಿಯ ತಮ್ಮ ನಿವಾಸದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿರು.
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌ಶೆಟ್ಟಿಯ ಕೊಲೆಯ ನಂತರ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಮಂಗಳೂರು ಬಂದ್‌ಮಾಡಲಾಗಿದೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್2013 ರಲ್ಲಿ ಅಧಿಕಾರದಲ್ಲಿದ್ದಾಗ 36 ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು. ಪಾಪ್ಯುಲರ್‌ಫ್ರಂಟ್‌ಮೊದಲಾದ ಸಂಘಟನೆಗಳು ಇಂತಹ ಕೃತ್ಯಗಳನ್ನು ಮಾಡಿವೆ ಎಂದು ಆರೋಪಿಸಿದರು. ಕಾಂಗ್ರೆಸ್‌ಅಧಿಕಾರಕ್ಕೆ ಬಂದ ಕೂಡಲೇ ಪಾಕಿಸ್ತಾನ ಜಿಂದಾಬಾದ್‌ಎಂದು ಘೋಷಣೆ ಕೂಗಲಾಗುತ್ತದೆ. ಪಾಕಿಸ್ತಾನಕ್ಕೆ ಅಪಮಾನ ಮಾಡಲು ಧ್ವಜವನ್ನು ರಸ್ತೆಗೆ ಅಂಟಿಸಿದರೆ ಅದನ್ನು ಮಹಿಳೆಯರು ಎತ್ತಿಕೊಂಡು ಹೋಗುತ್ತಾರೆ. ಅಮಾಯಕ ಹಿಂದೂ ಕಾರ್ಯಕರ್ತರ ಬಳಿ ಯಾವುದೇ ಆಯುಧ ಇಲ್ಲವೆಂದು ತಿಳಿದು ದಾಳಿ ಮಾಡಲಾಗುತ್ತಿದೆ ಎಂದು ಅಶೋಕ್ ಬೇಸರ ವ್ಯಕ್ತಪಡಿಸಿದರು.
ಸುಹಾಸ್ ಶೆಟ್ಟಿ ಕೊಲೆಗೆ ಪೊಲೀಸ್ ಇಲಾಖೆ ನೆರವಾಯ್ತೇ ಎಂಬ ಸಂಶಯವನ್ನು ವಿರೋಧ ಪಕ್ಷದ ನಾಯಕ ಆರ್ ಅಶೋಕ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು ಸುಹಾಸ್ ಎಲ್ಲಿದ್ದಾನೆ, ಅವನ ಬಳಿ ಯಾವುದಾದರೂ ಆಯುಧ ಇದೆಯಾ ಇಲ್ಲವಾ? ಅವನ ಚಲನವಲನಗಳ ಬಗ್ಗೆ ಹಂತಕರಿಗೆ ಗೊತ್ತಾಗಿದ್ದು ಹೇಗೆ, ನಮ್ಮ ಅಲ್ಲಿನ ಕಾರ್ಯಕರ್ತರು ಹೇಳುವ ಹಾಗೆ ಇಲಾಖೆಯ ಕೈವಾಡ ಇದೆಯಾ ಎಂಬ ಅನುಮಾನ ಮೂಡುತ್ತಿದೆ ಎಂದು ಹೇಳಿದರು. ಇದಕ್ಕೆಲ್ಲ ಕಾರಣ ಸಿದ್ದರಾಮಯ್ಯ ಸರ್ಕಾರದ ನಿಷ್ಕ್ರಿಯತೆ ಮತ್ತು ಪಾಕಿಸ್ತಾನ ಪರ ಹೇಳಿಕೆಗಳು ಎಂದು ಅಶೋಕ ಹೇಳಿದರು.
ಸಿಎಂ ಸಿದ್ದರಾಮಯ್ಯ ಯುದ್ಧ ಬೇಡ ಎನ್ನುತ್ತಾರೆ. ಪಾಕಿಸ್ತಾನ ಜಿಂದಾಬಾದ್‌ಎಂದು ಕೂಗುವ ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ. ಇಂತಹ ದೇಶದ್ರೋಹಿಗಳನ್ನು ಗುಂಡಿಕ್ಕುವ ಕಾನೂನು ಬಂದರೆ ಮಾತ್ರ ದೇಶ ಸುರಕ್ಷಿತವಾಗಿರುತ್ತದೆ. ಇನ್ನೆಷ್ಟು ಹಿಂದೂ ಕಾರ್ಯಕರ್ತರ ಬಲಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಬಯಸುತ್ತಾರೋ ಗೊತ್ತಿಲ್ಲ ಎಂದು ಅಶೋಕ್ ಆತಂಕ ವ್ಯಕ್ತಪಡಿಸಿದರು.
ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು NIA ಮೂಲಕ ತನಿಖೆ ನಡೆಸಬೇಕೆಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ.
ಈ ಕುರಿತು ತೀರ್ಥಹಳ್ಳಿಯಲ್ಲಿ ಮಾತನಾಡಿರುವ ಅವರು, ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿಯ ಬರ್ಬರ ಹತ್ಯೆ ನಡೆದಿದೆ. ಈ ಘಟನೆಯನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದ ಮೇಲೆ ಹಿಂದೂಗಳ ಹತ್ಯೆ ನಡೆಯುತ್ತಿದೆ. ಮಂಗಳೂರಿನಲ್ಲಿ ಮುಸ್ಲಿಂ ಕೋಮುವಾದಿ ಸಂಘಟನೆಗಳು ತುಂಬಾ ಸಕ್ರಿಯವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ಪ್ರವೀಣ್ ನೆಟ್ಟಾರು ಕೊಲೆಯ ತನಿಖೆಯ ನಂತರ ಸಾಕಷ್ಟು ವಿದೇಶಿ ಶಕ್ತಿಗಳು ಕೂಡ ಇರುವುದು ಕಂಡು ಬಂದಿದೆ. ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ. ಪೊಲೀಸ್ ಇಲಾಖೆ ನಿಷ್ಕ್ರಿಯವಾಗಿ ಸತ್ತು ಮಲಗಿದೆ ಎಂದು ಅವರು ದೂರಿದರು.
ಈ ಪ್ರಕರಣದಲ್ಲಿ ಹೆಣ್ಣು ಮಕ್ಕಳು ಸಹ ಭಾಗಿಯಾಗಿದ್ದಾರೆ. ಸುಮಾರು ಒಂದು ತಿಂಗಳಿನಿಂದ ಸುಹಾಶ್ ಶೆಟ್ಟಿ ಕಾರನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದರು. ಆತ್ಮ ರಕ್ಷಣೆಗೂ ಯಾವುದೇ ಆಯುಧಕ್ಕೆ ಅವಕಾಶ ಕೊಟ್ಟಿರಲಿಲ್ಲ. ವ್ಯವಸ್ಥಿತವಾಗಿ ಪೊಲೀಸರು ಸೇರಿ ಈ ಕೊಲೆ ನಡೆದಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಪೊಲೀಸರ ಬಗ್ಗೆಯೂ ತನಿಖೆ ಮಾಡಬೇಕಾಗುತ್ತದೆ ಎಂದು ಜ್ಞಾನೇಂದ್ರ ಹೇಳಿದರು.