ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಪಕ್ಷದ ಅಧ್ಯಕ್ಷನಾಗಿ ನಾನು ಅಧಿಕಾರ ಸ್ವೀಕರಿಸುವಾಗ ಮಹಿಳೆಯರು ಹಾಗೂ ಯುವಕರಿಗಾಗಿ ಕಾರ್ಯಕ್ರಮ ನೀಡುವುದಾಗಿ ಮಾತು ಕೊಟ್ಟಿದ್ದೆ.
ಅದರಂತೆ ಯುವ ನಿಧಿ ಹಾಗೂ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನಭಾಗ್ಯ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬಿಜೆಪಿಯವರು ಭಾವನೆ ಮೇಲೆ ರಾಜಕೀಯ ಮಾಡಿದರೆ, ಕಾಂಗ್ರೆಸ್ ಬದುಕಿನ ಮೇಲೆ ರಾಜಕೀಯ ಮಾಡುತ್ತದೆ ಎಂದು ಡಿಸಿಎಂ ಶಿವಕುಮಾರ್ ಬಿಜೆಪಿಗೆ ಟಾಂಗ್ ನೀಡಿದ್ದಾರೆ.