ವಕ್ಸ್ ಹೆಸರಿನಲ್ಲಿ ಖಾತೆ ಬದಲಾವಣೆ ಆಗಿದ್ದರೆ ತಕ್ಷಣ ಹಿಂಪಡೆಯಿರಿ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಲವು ರೈತರ ಹಾಗೂ ಇತರ ಆಸ್ತಿಗಳನ್ನು ವಕ್ಸ್ ಹೆಸರಿಗೆ ಖಾತೆ ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಭೆ ನಡೆಸಿ ಈ ಕೆಳಕಂಡಂತೆ ಸೂಚನೆಯನ್ನು ನೀಡಿರುತ್ತಾರೆ.

ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮ್ಯುಟೇಷನ್ ಮಾಡಲು ಯಾವುದೇ ಕಛೇರಿ ಅಥವಾ ಯಾವುದೇ ಪ್ರಾಧಿಕಾರದಿಂದ ನೀಡಲಾದ ನಿರ್ದೇಶನಗಳನ್ನು ತಕ್ಷಣದಿಂದಲೇ ಹಿಂಪಡೆಯುವುದು ಹಾಗೂ ಮ್ಯುಟೇಷನ್ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸುವುದು.

ಈ ಕುರಿತು ನೀಡಲಾದ ಎಲ್ಲಾ ನೋಟಿಸುಗಳನ್ನು ಹಿಂಪಡೆಯುವುದು. ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುತ್ತಿರುವ ರೈತರುಗಳ ವಿರುದ್ಧ ಯಾವುದೇ ಕ್ರಮವನ್ನು ಜರುಗಿಸತಕ್ಕದಲ್ಲ.

ಮುಖ್ಯಮಂತ್ರಿಗಳ ಸೂಚನೆಯನ್ವಯ ಸರ್ಕಾರ ನೆನಪೋಲೆ ಪತ್ರ ಬರೆದು ಇವುಗಳನ್ನು ತಕ್ಷಣದಿಂದಲೇ ಹಿಂಪಡೆಯಲಾಗಿದೆ ಎಂದು ಆದೇಶಿಸಿದ್ದಾರೆ.

ಮುಖ್ಯಮಂತ್ರಿಗಳ ಆದೇಶವಿದ್ದಾಗ್ಯೂ ಮೇಲಾಧಿಕಾರಿಗಳ ಅನುಮತಿ / ಅನುಮೋದನೆ ಇಲ್ಲದೆ ದಿನಾಂಕ:07-11-2024ರ ನೆನಪೋಲೆ-2ನ್ನು ಹೊರಡಿಸಿದ ಅಧಿಕಾರಿಯ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು.

ಮುಖ್ಯಮಂತ್ರಿಗಳ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕಂದಾಯ ಇಲಾಖೆ (ಭೂ ಮಂಜೂರಾತಿ, ಭೂ ಸುಧಾರಣೆ & ಭೂ ಕಂದಾಯ)ಯ ಸರ್ಕಾರದ ಅಪರ ಕಾರ್ಯದರ್ಶಿ ಡಾ: ಬಿ. ಉದಯ ಕುಮಾರ್ ಶೆಟ್ಟಿ ಅವರು ರಾಜ್ಯದ ಕಂದಾಯ ಇಲಾಖೆಯ ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ ಮತ್ತು ಎಲ್ಲಾ ಜಿಲ್ಲಾಧಿಕಾರಿಗಳಿಗೆ ನವೆಂಬರ್ 9 ರ ಪತ್ರದಲ್ಲಿ ಸೂಚನೆ ನೀಡಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";