ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2 ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ ಕನ್ನಡ ಭಾಷೆ ಹಾಗೂ ಕರ್ನಾಟಕ ಇತಿಹಾಸದ ಜ್ಞಾನವಿಲ್ಲದ ಅಜ್ಞಾನಿ ಸಚಿವ ಜಮೀರ್ ಅಹ್ಮದ್ ಖಾನ್ ಗೆ ನಾಚಿಕೆಯಾಗಬೇಕು ಎಂದು ಜೆಡಿಎಸ್ ಟೀಕಿಸಿದೆ.
ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯಲ್ಲಿ ಶಾಸ್ತ್ರೀಯ ಭಾಷೆ ಸ್ಥಾನಮಾನ ಹೊಂದಿರುವ ಕನ್ನಡದ ಬಗ್ಗೆ ಸಚಿವ ಜಮೀರ್‌ರಾಜ್ಯದ ಜನರಿಗೆ ತಪ್ಪು ಸಂದೇಶಗಳನ್ನು ನೀಡಿ ಅಪಮಾನ ಮಾಡಿರುವುದನ್ನು ಕನ್ನಡಿಗರು ಸಹಿಸಲು ಸಾಧ್ಯವಿಲ್ಲ.
ಸಿಎಂ ಸಿದ್ದರಾಮಯ್ಯ ಅವರೇ ಇಂತಹ ಬೇಜವಾಬ್ದಾರಿ, ಅವಿವೇಕಿ ಮಂತ್ರಿ ಜಮೀರ್‌ರನ್ನು ಸಂಪುಟದಿಂದ ಮೊದಲು ವಜಾಗೊಳಿಸಿ ಎಂದು ಜೆಡಿಎಸ್ ಆಗ್ರಹ ಮಾಡಿದೆ.

