ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು:
ತಾಲೂಕಿನ ಬಿ.ಜಿ.ಕೆರೆ ಗ್ರಾಮದ ವೀರಭದ್ರಪ್ಪ ತೋಟದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೊಲೆರೋ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಾಲೂಕಿನ ಬಿ.ಜಿ.ಕೆರೆ ಗ್ರಾಮದ ವೀರಭದ್ರಪ್ಪ ತೋಟದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ದಿನ ಸಂಜೆ ವೇಳೆ ಪೊಲೀಸರು ವಾಹನ ತಪಾಸಣೆ ನಡೆಸುವ ವೇಳೆ ಬೊಲೆರೋ ಪಿಕಪ್ ವಾಹನದ ಚಾಲಕನು ವಾಹನಗಳ ತಪಾಸಣೆ ಮಾಡುವುದನ್ನು ಕಂಡು ದೂರದಲ್ಲಿಯೇ ಎಪಿ-೩೯ , ಟಿಕ್ಯೂ-೩೧೧೮ ನೇ ಬುಲೇರೋ ಪಿಕಪ್ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ.
ಈ ವಾಹನದ ಚಾಲಕನು ಬಿಟ್ಟು ಈ ವಾಹನವನ್ನು ಪೊಲೀಸರು ಪರಿಶೀಲನೆ ಮಾಡಿದಾಗ ಬಡ ಕುಟುಂಬಗಳಿಗೆ ನೀಡುವ ಪಡಿತರ ಅಕ್ಕಿ ಪತ್ತೆಯಾಗಿದೆ. ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದು ಮೊಳಕಾಲ್ಮೂರು ಪಟ್ಟಣದ ಪೊಲೀಸ್ ಠಾಣೆಗೆ ಸಾಗಿಸಲಾಗಿದೆ.
ಪಡಿತರ ಅಕ್ಕಿ ಎಂದು ಗುರುತಿಸಲು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕ ಗೀತಾಂಜಿನೇಯ , ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಮಲ್ಲಿಕಾರ್ಜುನ ಪೊಲೀಸ್ ಠಾಣೆಗೆ ಆಗಮಿಸಿ ಪರಿಶೀಲನೆ ನಡೆಸಿ ಪಡಿತರ ಅಕ್ಕಿ ಎಂದು ದೃಢಪಡಿಸಿದ್ದಾರೆ.
ವಶಕ್ಕೆ ಪಡೆದ ಬುಲೆರೋ ವಾಹನದಲ್ಲಿ ಪ್ಲಾಸ್ಟಿಕ್ ಚೀಲಗಳಲ್ಲಿ ಬದಲಾಯಿಸಿರುವ ೬೯ ಚೀಲದಲ್ಲಿರುವ ೩೫ ಕ್ವಿಂಟಾಲ್ ಅಕ್ರಮ ಪಡಿತರ ಅಕ್ಕಿಯನ್ನು ಪೊಲೀಸರ ವಶಕ್ಕೆ ನೀಡಲಾಗಿದೆ. ಪಟ್ಟಣದ ಕ್ರೈಂ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಈರೇಶ್ ಹಾಗೂ ಸಿಬ್ಬಂದಿಗಳು ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದು ಪ್ರಕರಣ ಧಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.