ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅನಕ್ಷರಸ್ಥ ಕರ್ನಾಟಕ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಉನ್ನತ ಶಿಕ್ಷಣವನ್ನು ಕಿತ್ತುಕೊಂಡು ಕರ್ನಾಟಕದ ಸಾಕ್ಷರತೆಯನ್ನೇ ಕುಗ್ಗಿಸುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಮುಡಾ, ವಾಲ್ಮೀಕಿ ನಿಗಮ, ಕಾರ್ಮಿಕ ಇಲಾಖೆಯಲ್ಲಿ ನೂರಾರು ಕೋಟಿ ಭ್ರಷ್ಟಾಚಾರ ಮಾಡಿ ಲೂಟಿ ಹೊಡೆಯುವ ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ವಿವಿಗಳಿಗೆ ಅನುದಾನ ನೀಡಬೇಕಾಗುತ್ತೆ ಎಂದು ಮುಚ್ಚುತ್ತಿದೆ. ಕೊಡಗು ವಿವಿಯಲ್ಲಿ ಹಲವು ಕೋರ್ಸ್‌ಗಳನ್ನು ಬಂದ್‌ಮಾಡಿ ವಿವಿಗೆ ತಿಲಾಂಜಲಿ ಇಡಲು ಹೊರಟಿದೆ ಎಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.
ವಿಶ್ವವಿದ್ಯಾಲಯಗಳ ಮೇಲೆ ರಾಜ್ಯಪಾಲರಿಗಿದ್ದ ಅಧಿಕಾರವನ್ನು ಕಿತ್ತುಕೊಂಡ ಕಾಂಗ್ರೆಸ್, ರಾಜ್ಯದಲ್ಲಿ ವಿವಿಗಳನ್ನು ಬುಡ ಸಮೇತ ಕಿತ್ತು ಹಾಕಲು ಹೊರಟಿರುವುದು ಕನ್ನಡಿಗರ ದೌರ್ಭಾಗ್ಯ ಸರಿ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.