ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಸ್ಥಾಪಿತವಾದ ಪಂಚಾಯತ್ ರಾಜ್ ವ್ಯವಸ್ಥೆಯು ಮೂರು ಹಂತಗಳನ್ನು ಹೊಂದಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕಿನ ಮಟ್ಟದಲ್ಲಿ ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯಿತಿ.
ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಾಗೂ ಭಾರತ ದೇಶದ ಗ್ರಾಮೀಣ ಸಬಲೀಕರಣಕ್ಕೆ ಪಂಚಾಯತ್ ರಾಜ್ ವ್ಯವಸ್ಥೆ ಒಂದು ಶಕ್ತಿಯಾಗಿ ನಿಂತಿದೆ.
ಪಿತಾಮಹ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕನಸು ಕಂಡಿದ್ದರು. ಪ್ರಭುತ್ವದ ಆಡಳಿತಾತ್ಮಕ ನೀತಿಯಲ್ಲಿ ಪಂಚಾಯಿತಿ ವ್ಯವಸ್ಥೆಯನ್ನು ಬಲಿಷ್ಟಗೋಳಿಬಬೇಕು. ದುರದೃಷ್ಟವಶಾತ್ ರಾಜ್ಯದಲ್ಲಿ ಸರಿಸುಮಾರು ಐದು ವರ್ಷಗಳಿಂದ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಆಡಳಿತ ಇಲ್ಲದಿರುವುದು ಗ್ರಾಮೀಣ ಪ್ರಾಂತ್ಯದ ಆಡಳಿತಕ್ಕೆ ತೋರುತ್ತಿರುವ ಅಗೌರವ. ಈ ವಿಚಾರ ದುರದೃಷ್ಟಕರವು ಹೌದು.
ಸರ್ಕಾರದ ಆಡಳಿತದಲ್ಲಿರುವ ಜನಪ್ರತಿನಿಧಿಗಳು ಗ್ರಾಮಾಡಳಿತಕ್ಕೆ ಬೆಂಬಲಿಸಬೇಕು. ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಆಡಳಿತವನ್ನು ಆದಷ್ಟು ಬೇಗನೇ ರಾಜ್ಯ ಸರ್ಕಾರ ತರಬೇಕು. ಕೇಂದ್ರ ಸರ್ಕಾರದಲ್ಲಿ ನೆನೆಗುದಿಗೆ ಬಿದ್ದಿರುವ ಸ್ಥಳೀಯ ಸಂಸ್ಥೆಯ ಸುಮಾರು 2000 ಸಾವಿರ ಕೋಟಿ ಅನುದಾನ ರಾಜ್ಯ ಸರ್ಕಾರ ತರಬೇಕಿದೆ. ಇದು ಗ್ರಾಮೀಣ ಪ್ರದೇಶದ ಅಭಿವೃದ್ಧಿ ಪರವಾಗಿದೆ ಕಾಂಗ್ರೆಸ್ ಮುಖಂಡ ರಘು ಗೌಡ ತಿಳಿಸಿದ್ದಾರೆ.