ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಚನ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರ, ಹಾಲಿನ ದರವನ್ನು ಲೀಟರ್‌ಗೆ 4 ರೂ. ಹೆಚ್ಚಿಸಿ ಖಜಾನೆ ತುಂಬಿಸಿಕೊಳ್ಳುತ್ತಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
ಆದರೆ, 6 ತಿಂಗಳಿಂದ ಹಾಲು ಉತ್ಪಾದಕ ರೈತರಿಗೆ ನೀಡಬೇಕಾದ 656.07 ಕೋಟಿ ರೂ. ಪ್ರೋತ್ಸಾಹ ಧನವನ್ನು ನೀಡಿಲ್ಲ ಎಂದು ಜೆಡಿಎಸ್ ದೂರಿದೆ.
ಗ್ರಾಮೀಣ ಪ್ರದೇಶಗಳಲ್ಲಿಯೂ ಖಾಸಗಿ ಹಾಲಿನ ಕಂಪನಿಗಳ ಪ್ರವೇಶವಾಗಿದ್ದು, ಪೈಪೋಟಿ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಸಮಯಕ್ಕೆ ಸರಿಯಾಗಿ ಸರ್ಕಾರ ಪ್ರೋತ್ಸಾಹ ಧನ ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿರುವುದು ಸರಿಯಲ್ಲ.
ಸಿದ್ದರಾಮಯ್ಯ ಅವರೇ ತಕ್ಷಣ ಹಾಲು ಉತ್ಪಾದಕರ ಬಾಕಿ ಹಣವನ್ನು ಪಾವತಿಸಿ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರನ್ನು ರಕ್ಷಿಸಿ ಎಂದು ಜೆಡಿಎಸ್ ತಾಕೀತು ಮಾಡಿದೆ.