ಕೇಂದ್ರ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಿ-ಹೆಚ್ ಡಿಕೆ

News Desk

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರು ಜಿಲ್ಲೆಯ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (DISHA) ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಪಾಲ್ಗೊಂಡು, ವಿವಿಧ ಅಭಿವೃದ್ಧಿ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚೆ ನಡೆಸಿದರು.

- Advertisement - 

ಸರ್ವಜನರ ಕಲ್ಯಾಣ ಹಾಗೂ ಜಿಲ್ಲೆಯ ಆಮೂಲಾಗ್ರ ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮರ್ಥ, ದೂರದೃಷ್ಟಿ ನಾಯಕತ್ವದಲ್ಲಿ ಅನುಷ್ಠಾನಕ್ಕೆ ತರಲಾಗಿರುವ ಮಹತ್ವದ ಕಾರ್ಯಕ್ರಮ, ಯೋಜನೆಗಳ ಪ್ರಗತಿಯ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು.

- Advertisement - 

ಕೇಂದ್ರ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಲು ಅವಿರತವಾಗಿ ಶ್ರಮಿಸಬೇಕು. ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಕೇಂದ್ರದ ಸೌಲಭ್ಯಗಳು ಸಿಗುವಂತೆ ದುಡಿಯಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.

ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮರಾಜ ನಗರ ಕ್ಷೇತ್ರದ ಸಂಸದ ಸುನೀಲ್ ಬೋಸ್, ಶಾಸಕರಾದ ಜಿ.ಡಿ. ಹರೀಶ್ ಗೌಡ, ಶ್ರೀವತ್ಸ, ಮಾಜಿ ಶಾಸಕ ಹಾಗೂ ದಿಶಾ ಸಮಿತಿ ನಾಮನಿರ್ದೇಶಿತ ಸದಸ್ಯರಾದ ಅಶ್ವಿನ್ ಕುಮಾರ್ ಹಾಗೂ ಜಿಲ್ಲಾಡಳಿತದ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

- Advertisement - 

 

 

 

Share This Article
error: Content is protected !!
";