ಆಂಧ್ರದ ಸಿಎಂ ನಾಯ್ಡು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಮಹತ್ವದ ಚರ್ಚೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರೊಂದಿಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ನವದೆಹಲಿಯ ಸಂಸತ್ ಭವನದ ಕಚೇರಿಯಲ್ಲಿ ವಿವಿಧ ಅಭಿವೃದ್ಧಿ ವಿಷಯಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು.

ಆಂಧ್ರ ಪ್ರದೇಶಕ್ಕೆ ಸಂಬಂಧಿಸಿದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವಾಲಯಕ್ಕೆ ಸಂಬಂಧಿಸಿದ ವಿಷಯಗಳ ಜತೆಗೆ ರಾಷ್ಟ್ರದ ಹಿತಕ್ಕೆ ಪೂರಕವಾದ ವಿಶಾಲ ದೃಷ್ಟಿಕೋನದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತೂ ನಾವು ಪರಸ್ವರು ಸಮಾಲೋಚನೆ ನಡೆಸಿದರು.

- Advertisement - 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮಗ್ರ ಮತ್ತು ವೇಗವರ್ಧಿತ ದೂರದೃಷ್ಟಿಗೆ ಅನುಗುಣವಾಗಿ ನಮ್ಮಿಬ್ಬರ ನಡುವಿನ ಸಂವಹನವು ಅತ್ಯಂತ ಸಕಾರಾತ್ಮಕ ಮತ್ತು ರಚನಾತ್ಮಕವಾಗಿತ್ತು ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಹಿರಿಯ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿದ್ದು ಸಂತೋಷ ಉಂಟು ಮಾಡಿತು. ಸಚಿವಾಲಯದ ನನ್ನ ಆತ್ಮೀಯ ಸಹೋದ್ಯೋಗಿಗಳಾದ ಬಿಜೆಪಿ ವರ್ಮ, ಕೋಲಾರ ಸಂಸದ ಮಲ್ಲೇಶ್ ಬಾಬು ಅವರು ಸೇರಿದಂತೆ ಆಂಧ್ರ ಪ್ರದೇಶದ ತೆಲುಗುದೇಶಂ, ಬಿಜೆಪಿ ಮತ್ತು ಜನಸೇನ ಪಕ್ಷಗಳ ಸಂಸದರು ಹಾಜರಿದ್ದರು.

- Advertisement - 

 

Share This Article
error: Content is protected !!
";