ನೂತನ ಜಿಲ್ಲಾಧಿಕಾರಿ ಕಟ್ಟಡ ವೈದ್ಯಕೀಯ ಕಾಲೇಜಿಗೆ ಹಸ್ತಾಂತರ ಕುರಿತು ಮಹತ್ವ ಚರ್ಚೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ವಿಕಾಸ ಸೌಧದಲ್ಲಿ ಬುಧವಾರ ಯೋಜನೆ ಹಾಗೂ ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಚಿತ್ರದುರ್ಗ ಜಿಲ್ಲಾಧಿಕಾರಿಗಳ ನೂತನ ಕಟ್ಟಡವನ್ನು ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸುವ ಕುರಿತು ಚರ್ಚೆ ನಡೆಸಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಸ್ಥಳ ಪರಿಶೀಲನೆ ನಡೆಸಿ, ತಮ್ಮ ಅಭಿಪ್ರಾಯವನ್ನು ಮಂಡಿಸಿದ ನಂತರ, ಈ ಕುರಿತು ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು, ಕಂದಾಯ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲೆಯ ಎಲ್ಲ ಶಾಸಕರು ಮತ್ತು ಸಚಿವರ ಸಭೆಯಲ್ಲಿ ಕೈಗೊಳ್ಳಲು ನಿರ್ಧರಿಸಲಾಯಿತು.

- Advertisement - 

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯೊಂದಿಗೆ ಸಭೆ: ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ಅವರೊಂದಿಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಮಹತ್ವದ ಸಭೆ ನಡೆಸಿದರು.

ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಗಳ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರಿಸುವುದು ಹಾಗೂ ಹಾಲಿ ಕಟ್ಟಡವನ್ನು ವೈದ್ಯಕೀಯ ಕಾಲೇಜಿನ ಬಳಕೆಗೆ ನೀಡುವ ಕುರಿತು ಸಭೆಯಲ್ಲಿ ಸವಿಸ್ತಾರವಾಗಿ ಚರ್ಚೆ ನಡೆಸಲಾಯಿತು. ಈ ಬಗ್ಗೆ ಈಗಾಗಲೇ ಕಂದಾಯ ಸಚಿವರೊಂದಿಗೆ ಚರ್ಚಿಸಿದಂತೆ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಹಾಗೂ ತಜ್ಞರ ತಂಡವನ್ನು ಸ್ಥಳ ವೀಕ್ಷಣೆಗೆ ಕಳುಹಿಸುವಂತೆ ಪ್ರಧಾನ ಕಾರ್ಯದರ್ಶಿಗಳಿಗೆ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.

- Advertisement - 

ಸಭೆಯಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಸಿಂಗ್ ಕಟಾರಿಯ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ  ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ. ರಘುಮೂರ್ತಿ, ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ಜಿ.ಪಂ ಸಿಇಒ ಡಾ.ಎಸ್.ಆಕಾಶ್ ಹಾಗೂ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಇದ್ದರು.

 

 

 

Share This Article
error: Content is protected !!
";