ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿಟ್ಲರ್ ಸಿದ್ದರಾಮಯ್ಯ ಸರ್ಕಾರದಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಜೆಡಿಎಸ್ ಟೀಕಿಸಿದೆ.
ಅಮಾನತಾಗಿರುವ ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ಪವನ್‌ನಜ್ಜೂರ್‌ಮನನೊಂದು, ಆತ್ಮಹತ್ಯೆಗೆ ಯತ್ನಿಸಿರುವುದಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ.
ಸ್ವಪಕ್ಷದ ಶಾಸಕರನ್ನು ರಕ್ಷಿಸಲು ಹೊಣೆಗೇಡಿ ಕಾಂಗ್ರೆಸ್‌ಸರ್ಕಾರ, ತಪ್ಪು ಮಾಡಿದವರನ್ನು ಬಿಟ್ಟು, ಬಳ್ಳಾರಿ ಎಸ್ ಪಿ ಆಗಿ ಅಧಿಕಾರ ಸ್ವೀಕರಿಸಿದ 24 ಗಂಟೆಗಳಲ್ಲೇ ಪವನ್‌ನಜ್ಜೂರ್‌ಅವರನ್ನು ಅಮಾನತುಗೊಳಿಸಿ ಬಲಿಪಶು ಮಾಡಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
ಕಾಂಗ್ರೆಸ್‌ಶಾಸಕರ ಗೂಂಡಾಗಿರಿ ಮತ್ತು ಕಾರ್ಯಕರ್ತನ ಹತ್ಯೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನಡೆ ಅನುಮಾನ ಹುಟ್ಟುಹಾಕಿದೆ ಎಂದು ಜೆಡಿಎಸ್ ಆರೋಪಿಸಿದೆ.

