ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಹಲವು ಭಾಗಗಳಲ್ಲಿ ಭಾನುವಾರ ಸಂಜೆ ಆರ್ಭಟ ಮುಂದುವರೆದಿದೆ.
ಬೆಂಗಳೂರು ನಗರದ ಕೆಂಗೇರಿ
, ಮಹದೇವಪುರ, ಗರುಡಚಾರ ಪಾಳ್ಯ, ಕೆ.ಆರ್.ಪುರಂ, ಹೂಡಿ, ಸಿಂಗನಾಯಕನಹಳ್ಳಿ, ಕೋರಮಂಗಲ, ಆಡುಗೋಡಿ, ಎಲೆಕ್ಟ್ರಾನಿಕ್‌ಸಿಟಿ, ರಿಚ್ಮಂಡ್ ಸರ್ಕಲ್‌, ಶಾಂತಿನಗರ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮಳೆಯಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು.

ವೈಟ್​ಫಿಲ್ಡ್​ ಸುತ್ತಮುತ್ತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಾಲಕರು ನಿಧಾನವಾಗಿ ಮತ್ತು ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಭವಿಷ್ಯ ಹೇಳಿದೆ.

ಮುಂದಿನ 2 ದಿನ ಮಳೆ-
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

 

Share This Article
error: Content is protected !!
";