ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರದಲ್ಲಿ ಸ್ತ್ರೀ ಪೀಡಕರಿಗೆ ಶ್ರೀರಕ್ಷೆ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಕಳೆದ ಎರಡು ವರ್ಷಗಳಲ್ಲಿ ಅತ್ಯಾಚಾರ, ಲೈಂಗಿಕ ಕಿರುಕುಳ, ವರದಕ್ಷಿಣೆ, ದೌರ್ಜನ್ಯ ಸೇರಿದಂತೆ ಬರೋಬ್ಬರಿ 25,700 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ ಕೇವಲ 39 ಪ್ರಕರಣಗಳಲ್ಲಿ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗಿದೆ.
ಗ್ಯಾರೆಂಟಿ ಹೆಸರಿನಲ್ಲಿ ಮಹಿಳೆಯರ ಮತ ಪಡೆದು ಅಧಿಕಾರಕ್ಕೆ ಬಂದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಸುರಕ್ಷತೆ, ನೆಮ್ಮದಿಯ ಗ್ಯಾರೆಂಟಿ ಕೊಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಅಶೋಕ್ ಆರೋಪಿಸಿದ್ದಾರೆ.