ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಜಯ ಸಾಧಿಸಿದೆ.
ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರಗಳಲ್ಲಿ ಆಡಳಿತ ರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ನಿರೀಕ್ಷೆಗೂ ಮೀರಿ ಜಯ ಸಾಧಿಸುವ ಮೂಲಕ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗೆದ್ದು ಬೀಗಿದ್ದಾರೆ.
ಸಂಡೂರು ಕ್ಷೇತ್ರ- ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ. ಅನ್ನಪೂರ್ಣ (ಕಾಂಗ್ರೆಸ್)- 93616 ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಬಂಗಾರ ಹನುಮಂತ (ಬಿಜೆಪಿ)- 83967 ಅವರಿಗಿಂತ 9649 ಮತಗಳನ್ನು ಪಡೆದು ಗೆದ್ದು ಬೀಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಈ ಅನ್ನಪೂರ್ಣ ಅವರು ಬಿಜೆಪಿಯ ಬಂಗಾರ ಹನುಮಂತ ಅವರಿಗಿಂತ 9649 ಹೆಚ್ಚು ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.
ಚನ್ನಪಟ್ಟಣ-
ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೈನಿಕ ಸಿ.ಪಿ.ಯೋಗೇಶ್ವರ್ ಅವರು ತನ್ನ ಪ್ರತಿಸ್ಪರ್ಧಿ ಜೆಡಿಎಸ್ ಪಕ್ಷದ ನಿಖಿಲ್ ಕುಮಾರಸ್ವಾಮಿ ಅವರಿಗಿಂತ 25,357 ಮತಗಳ ಅಂತರದಿಂದ ಗೆದ್ದಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯ ಫಲಿತಾಂಶದ 20ನೇ ಸುತ್ತಿನ ಮತ ಎಣಿಕೆ ಮುಕ್ತಾಯ ಕಂಡಿದ್ದು, JDS ಒಟ್ಟು 87031 ಮತಗಳನ್ನು ಪಡೆದಿದೆ, ಕಾಂಗ್ರೆಸ್112388 ಮತಗಳನ್ನು ಪಡೆದಿದ್ದು, ಆ ಮೂಲಕ ಕಾಂಗ್ರೆಸ್‌ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು 25,357 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.
ಶಿಗ್ಗಾಂವಿಯಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ ಜಯ ಸಾಧಿಸಿದ್ದಾರೆ.
ಮೂರು ಗೆಲ್ಲುವ ವಿಶ್ವಾಸ ಇತ್ತು: ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಕಂಡ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ಈ ಫಲಿತಾಂಶ 2028ರ ಚುನಾವಣೆಯ ದಿಕ್ಸೂಚಿಯಾಗಿದೆ. ಮಾಧ್ಯಮಗಳ ಸಮೀಕ್ಷೆ ಸುಳ್ಳಾಗ್ತದೆ ಎಂದು ನಾನು ಹೇಳಿದ್ದೆ. ನಾನು ಮಾಡಿದ್ದ ಸಮೀಕ್ಷೆಯಲ್ಲಿ ಮೂರಕ್ಕೆ ಮೂರು ಗೆಲ್ಲುವ ವಿಶ್ವಾಸ ಇತ್ತು. ಕ್ಷೇತ್ರದ ಸೋಲು, ಗೆಲುವು ನನ್ನದೇ ಎಂದು ಹೇಳಿದರು.
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಈ ತುಕಾರಾಂ ಅವರು ಭರ್ಜರಿ ಗೆಲುವು ಕಂಡಿದ್ದಾರೆ. ಈ ಹಿನ್ನೆಲೆ ಅನ್ನಪೂರ್ಣ ತುಕಾರಾಂ ಅವರಿಗೆ ಚುನಾವಣಾಧಿಕಾರಿಗಳು ಗೆಲುವಿನ ಪತ್ರ ನೀಡಿದರು.
ರಾಜ್ಯದ ಮೂರು ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಕಂಡ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಅವರು ತಮ್ಮ ಪೋಸ್ಟ್ ನಲ್ಲಿ ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ ಎಂದು ಹೇಳಿದ್ದಾರೆ.