ಸೆ.25ರಂದು ಟಿಎಪಿಸಿಎಂಎಸ್ ನೂತನ ಆಡಳಿತ ಕಚೇರಿ ಉದ್ಘಾಟನಾ ಸಮಾರಂಭ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರ ಸಂಘದ ವತಿಯಿಂದ ಇದೇ ಸೆ.25ರಂದು ಬೆಳಿಗ್ಗೆ 11.30ಕ್ಕೆ ನಗರದ ಎಪಿಎಂಸಿ ಸಿಬ್ಲಾಕ್ ಆವರಣದ ನೂತನ ಆಡಳಿತ ಕಚೇರಿಯ ಮುಂಭಾಗದಲ್ಲಿ “75ನೇ ವರ್ಷದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ನೂತನವಾಗಿ ನಿರ್ಮಿಸಿರುವ ಟಿಎಪಿಸಿಎಂಎಸ್ ಆಡಳಿತ ಕಚೇರಿಯಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಸಂಸದ ಗೋವಿಂದ ಎಂ ಕಾರಜೋಳ ಘನ ಉಪಸ್ಥಿತಿ ವಹಿಸುವರು. ಸಹಕಾರ ಸಚಿವ ಕೆ.ಎನ್.ರಾಜಣ್ಣ ನೂತನ ಕಚೇರಿ ಉದ್ಘಾಟಿಸುವರು. ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ್ಯಕ್ರಮ ಉದ್ಘಾಟಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.

ಟಿ..ಪಿ.ಸಿ.ಎಂ.ಎಸ್ ಅಧ್ಯಕ್ಷ ಹೆಚ್.ಎಂ.ಮಂಜುನಾಥಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಉಪಾಧ್ಯಕ್ಷ ಶಿವಕುಮಾರಗೌಡ ಪಾಟೀಲ, ನಿರ್ದೇಶಕರಾದ ಎಸ್.ಆರ್.ಗಿರೀಶ್,

ಎಸ್.ಜೆ.ಹನುಮಂತರಾಯ, ಕೆ.ಎಸ್.ಸುರೇಶ್, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಹಾಗೂ ವಿಶೇಷ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ಅಹಕಾರ ಸಂಘಗಳ ನಿಬಂಧಕ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಹಕಾರ ಸಂಘಗಳ ಅಪರ ನಿಬಂಧಕ ಜಿ.ಎಂ.ರವೀಂದ್ರ, ಜಂಟಿ ನಿಬಂಧಕ ಅಶ್ವತನಾರಾಯಣ,

ಸಿ.ಡಿ.ಸಿ.ಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ ಉಲ್ಲಾ ಷರೀಪ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಆಶಾ, ಸಹಕಾರ ಸಂಘಗಳ ಉಪನಿಬಂಧಕ ಆರ್.ಎಸ್.ದಿಲೀಪ್ ಕುಮಾರ್, ಲೆಕ್ಕ ಪರಿಶೋಧನಾ ಉಪನಿರ್ದೇಶಕ ರಂಗಸ್ವಾಮಿ, ಇಪ್ಕೋ ರಾಜ್ಯ ವ್ಯವಸ್ಥಾಪಕ ಡಾ.ಸಿ.ನಾರಾಯಣ ಸ್ವಾಮಿ, ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್, ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಕೆ.ಪಿ.ಮಧುಸೂದನ್,

.ಪಿ.ಎಂ.ಸಿ ಹೆಚ್ಚುವರಿ ನಿರ್ದೆಶಕರು ಹಾಗೂ ಕಾರ್ಯದರ್ಶಿ ಬಿ.ಎಲ್.ಕೃಷ್ಣಪ್ಪ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಬಾಹುಬಲಿ ಹಂಜೆ, ತಹಶೀಲ್ದಾರ್ ಡಾ.ನಾಗವೇಣಿ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿ ಎನ್.ಚಂದ್ರಕುಮಾರ್ ಹಾಗೂ ತಾಲ್ಲೂಕಿನ ಎಲ್ಲಾ ಜನಪ್ರತಿನಿಧಿಗಳು, ಸರ್ವ ಸದಸ್ಯರು, ಸಹಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಚಿತ್ರದುರ್ಗ ತಾಲ್ಲೂಕು ವ್ಯವಸ್ಥಾಯೋತ್ಪನ್ನಗಳ ಮಾರಾಟದ ಸಹಕಾರ ಸಂಘದ ಕಾರ್ಯದರ್ಶಿ ತಿಳಿಸಿದ್ದಾರೆ.

  

- Advertisement -  - Advertisement -  - Advertisement - 
Share This Article
error: Content is protected !!
";