ಆದಿಚುಂಚನಗಿರಿ ವಿಶ್ವವಿದ್ಯಾಲಯ ಉದ್ಘಾಟನೆ ಸ್ವಾಮೀಜಿ ಕನಸು –ನನಸು: ಡಾ.ನಿರ್ಮಲಾನಂದನಾಥ ಸ್ವಾಮೀಜಿ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆದಿಚುಂಚನಗಿರಿ ವಿಶ್ವವಿದ್ಯಾಲಯ ಉದ್ಘಾಟನೆ ಆಗುವ ಮೂಲಕ ಬಾಲಗಂಗಾಧರನಾಥ ಸ್ವಾಮೀಜಿಗಳ ಕನಸು
ನನಸಾಗಿದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಬೆಂಗಳೂರು ಉತ್ತರ ತಾಲ್ಲೂಕಿನ ನಗರೂರಿನ ಬಿಜಿಎಸ್ ಎಂಸಿಎಚ್ ಆವರಣದಲ್ಲಿ ಆದಿಚುಚನಗಿರಿ ವಿಶ್ವವಿದ್ಯಾಲಯ, ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ವಿಶ್ವವಿದ್ಯಾಲಯದ ಕುಲಪತಿಗಳೂ ಆಗಿರುವ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ವಿವಿ ಕ್ಯಾಂಪಸ್ ಉದ್ಘಾಟಿಸಿದ ಸಮಾರಂಭದಲ್ಲಿ ಸ್ವಾಮೀಜಿಗಳು ಮಾತನಾಡಿದರು.

- Advertisement - 

1974 ರಲ್ಲಿ ಸರಿಯಾದ ಆರೋಗ್ಯ ಸೇವೆ ಸಿಗದೇ ನಮ್ಮ ಗುರುಗಳು ದೇಹ ತ್ಯಾಗ ಮಾಡಿದಾಗ ನಮ್ಮ ಹಿಂದಿನ ಗುರುಗಳು ಮಾಡಿದ ಸಂಕಲ್ಪದಿಂದ ಹಲವಾರು ಆರೋಗ್ಯ, ವೈದ್ಯಕೀಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಸಾಧ್ಯವಾಯಿತು. ವಿವಿ ಸ್ಥಾಪನೆ ಮೂಲಕ ಬಾಲ ಗಂಗಾಧರನಾಥ ಸ್ವಾಮೀಜಿ ಅವರ ಕನಸು ನನಸಾಗಿದೆ.

ಅಮಿತ್ ಶಾ ಅವರು ದೊಡ್ಡ ಶಕ್ತಿ. ಮರ ಹಣ್ಣು, ಹೂವು ನೀಡಬೇಕಾದರೆ ಮರದ ಬೇರುಗಳು ಆಳವಾಗಿರಬೇಕಾಗುತ್ತದೆ. ಹಾಗೆಯೇ ಅಮಿತ್ ಶಾ ಗಟ್ಟಿತನದ ನಾಯಕರು. ನಮ್ಮ ದೇಶದ ಸಂಸ್ಕೃತಿ, ಪರಂಪರೆ ಶ್ರೇಷ್ಠವಾದದ್ದು. ಭಾರತ ಉಳಿದರೆ ಅಳಿಯುವರಾರು, ಭಾರತ ಅಳಿದರೆ ಉಳಿಯುವವರು ಯಾರು ಎಂಬ ಮಾತು ಅಕ್ಷರಶಃ ಸತ್ಯ. ನಮ್ಮಲ್ಲಿರುವ ಶತಮಾನಗಳ ಜ್ಞಾನ ಸಂಪತ್ತು ಮತ್ತು ಪರಂಪರೆಯನ್ನು ಉಳಿಸಬೇಕಾಗಿದೆ ಎಂದು ಹೇಳಿದರು.

- Advertisement - 

 

 

 

 

Share This Article
error: Content is protected !!
";