ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಇದೇ ಡಿ.03ರಂದು ಬೆಳಿಗ್ಗೆ 11ಕ್ಕೆ ಅಂಬ್ಯುಲೆನ್ಸ್ ಲೋಕಾರ್ಪಣೆ ಹಾಗೂ 40 ಹಾಸಿಗೆಗಳ ವಾರ್ಡ್ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ), ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.