ಬಾನು ಮುಷ್ತಾಕ್ ದಸರಾ ಉದ್ಘಾಟನೆ ನನ್ನ ತಕರಾರೇನಿಲ್ಲ-ಕುಮಾರಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದಕ್ಕೆ ನನ್ನ ತಕರಾರು ಏನೂ ಇಲ್ಲ. ಆದರೆ ಉದ್ಧಟತನ‌ಬೇಡ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾಯಿ ಚಾಮುಂಡೇಶ್ವರಿ ಮೆರವಣಿಗೆ ಜವಾಬ್ದಾರಿ ಕೊಟ್ಟಿದ್ದಾರೆ. ಇದಕ್ಕೆ ನನ್ನ ತಕರಾರು ಏನೂ ಇಲ್ಲ. ಆದರೆ ದೇಗುಲ ಹಿಂದೂಗಳ ಆಸ್ತಿಯಲ್ಲ ಅಂತಾರೆ. ಮುಷ್ತಾಕ್ ಅವರಿಂದ ಪೂಜೆ‌ಮಾಡಿಸೋದು ಬೇರೆ. ಧಾರ್ಮಿಕ ಕ್ಷೇತ್ರಗಳಿಗೆ ಈ ರೀತಿ ಅಪಚಾರ ಮಾಡುವುದು ಸರಿಯಲ್ಲ. ಇದು ಸರ್ಕಾರಕ್ಕೆ ಕುತ್ತು ತರಲಿದೆ ಎಂದು ಕುಮಾರಸ್ವಾಮಿ ಎಚ್ಚರಿಸಿದರು.

- Advertisement - 

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ಆರ್​ಎಸ್ಎಸ್ ಗೀತೆ ಹಾಡಿರುವ ಬಗ್ಗೆ ಪ್ರತಿಕ್ರಿಯಿಸಿ, ಸದನದಲ್ಲಿ ಡಿ.ಕೆ. ಶಿವಕುಮಾರ್​ ಅವರು ಆರ್​ಎಸ್​ಎಸ್ ಗೀತೆ ಹಾಡಿದ್ದಾರೆ. ನಾನು ಬಹಳ‌ನೋವಿನಿಂದ ಹೇಳುತ್ತಿದ್ದೇನೆ. ತಮಾಷೆಗೂ ಆ ರೀತಿ ಹೇಳೋದನ್ನು ಕಾಂಗ್ರೆಸ್ ಒಪ್ಪಲ್ಲ. ಈಗ ಕ್ಷಮೆ ಕೇಳುವ ಪರಿಸ್ಥಿತಿ ಉದ್ಬವಿಸಿದೆ ಎಂದು ಕುಮಾರಸ್ವಾಮಿ ಟೀಕಿಸಿದರು.

ಧರ್ಮಸ್ಥಳ ಪ್ರಕರಣ ಸಂಬಂಧ ಮಾತನಾಡಿದ ಕುಮಾರಸ್ವಾಮಿ, ಮುಖ್ಯಮಂತ್ರಿ ಅವರು ಆ ವಿಷಯದಲ್ಲಿ ತಕ್ಷಣ ಕ್ರಮ‌ತಗೊಂಡ್ರು. ಎಡಪಂಥೀಯ ಶಕ್ತಿಗಳು ಇದೆ ಅಂತಿದ್ದಾರೆ. ಇದರ ಹಿಂದೆ ಯಾರಿದ್ದಾರೆಂಬ ಮಾತಿದೆ. ಏನಿದ್ರೂ ಮುಂದೆ ಗೊತ್ತಾಗಲಿದೆ ಎಂದು ತಿಳಿಸಿದರು.

- Advertisement - 

 

 

Share This Article
error: Content is protected !!
";