ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಎಲ್ಲಾ ಕ್ಷೇತ್ರಗಳಲ್ಲಿಯೂ ಪೈಪೋಟಿಯಿರುವುದರಿಂದ ಒಂದೊಂದು ಅಂಕಗಳಿಗೂ ಪ್ರಾಮುಖ್ಯತೆಯಿದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಸಂಪನ್ಮೂಲ ವ್ಯಕ್ತಿ ನಾಗರಾಜ್ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.
ಮದಕರಿನಾಯಕ ವಿದ್ಯಾಸಂಸ್ಥೆಯಡಿಯಲ್ಲಿ ಬರುವ ಮಹರಾಜ ಮದಕರಿನಾಯಕ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಕಾಲೇಜು ಯಶೋಧರಮ್ಮ ಬೋರಪ್ಪ ಮಹಿಳಾ ಪ್ರಥಮ ದರ್ಜೆ ಕಾಲೇಜು ಇವುಗಳ ಸಹಯೋಗದೊಂದಿಗೆ ಕೋಟೆ ಮುಂಭಾಗವಿರುವ ಮದಕರಿನಾಯಕ ಕಾಲೇಜಿನ ವಾಲ್ಮೀಕಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೇಗೆ ತಯಾರಿ ನಡೆಸಬೇಕೆಂಬುದರ ಕುರಿತು ಉಪನ್ಯಾಸ ನೀಡಿದರು.
ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ವಿದ್ಯಾರ್ಥಿಗಳು ತಯಾರಿ ನಡೆಸಬೇಕು. ಅದಕ್ಕಾಗಿ ಏಕಾಗ್ರತೆ, ಕಠಿಣ ಪರಿಶ್ರಮ, ಕೌಶಲ್ಯತೆ ಮುಖ್ಯ ಎಂದು ಹೇಳಿದರು.
ಸಹ ಪ್ರಾಧ್ಯಾಪಕಿ ಗಂಗಮ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಯಶೋಧರಮ್ಮ ಬೋರಪ್ಪ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ಲತಾ ಎಸ್. ಅಧ್ಯಕ್ಷತೆ ವಹಿಸಿದ್ದರು.
ಸಹಾಯಕ ಪ್ರಾಧ್ಯಾಪಕರುಗಳಾದ ನಟರಾಜ್, ಡಾ.ಕುಮಾರ್, ಡಾ.ಮಹೇಶ್, ಡಾ.ಶ್ರೀನಿವಾಸ್ ದೊಡ್ಡಮನಿ, ಡಾ.ಈರವ್ವ ಮಾಡಾಳ ಇವರುಗಳು ವೇದಿಕೆಯಲ್ಲಿದ್ದರು.

