ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೊಡ್ಡಬಳ್ಳಾಪುರ ನಗರದ 4 ನೇ ವಾರ್ಡ್ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ 54 ಲಕ್ಷ ರೂಗಳ ಸಿ.ಎಸ್.ಆರ್. ಅನುದಾನದಡಿ ನಿರ್ಮಿಸಲಾದ ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರವನ್ನು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್ ರವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ವಿನಾಯಕ ನಗರ ನಗರಸಭಾ ಸದಸ್ಯರಾದ ಬಿ.ನಾಗರತ್ನಮ್ಮ ಕೃಷ್ಣಮೂರ್ತಿ, ಅಸ್ಟಿಮೋ ಫೈ ಪ್ರೈವೇಟ್ ಲಿಮಿಟೆಡ್ ಕಂಪನಿಯ ಎಚ್.ಆರ್ ಮನೋಹರ್, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್, ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ, ಶಿಶು ಯೋಜನಾಧಿಕಾರಿ ವಿನೋದ್ ರಾಜ್, ನಗರಸಭೆ ಸದಸ್ಯರಾದ ಬಂತಿ ವೆಂಕಟೇಶ್,ಪದ್ಮನಾಭ, ನವೀನ್,ಸುಧಾರಾಣಿ ಲಕ್ಷ್ಮೀನಾರಾಯಣ್, ಬಿಜೆಪಿ ಮುಖಂಡ ಗೋಪಿ, ವತ್ಸಲಾ ಜಗನ್ನಾಥ್,ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

