ಡಯಾಲಿಸಿಸ್ ಹಾಗೂ ರಕ್ತ ನಿಧಿ ಕೇಂದ್ರ ಉದ್ಘಾಟನೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಎಜಾಕ್ಸ್ ಸಂಸ್ಥೆ ನೆರವಿನೊಂದಿಗೆ
4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಒಪಿಡಿ ಬ್ಲಾಕ್ ಡಯಾಲಿಸಿಸ್ ಕೇಂದ್ರ ಹಾಗೂ ರಕ್ತ ನಿಧಿ  ಕೇಂದ್ರಗಳನ್ನೊಳಗೊಂಡ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಅಹಾರ ನಾಗರೀಕ ಸರಬರಾಜು ಹಾಗೂ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಉಧ್ಘಾಟಿಸಿದರು.

ದೊಡ್ಡಬಳ್ಳಾಪುರ ಜಿಲ್ಲಾಸ್ಪತ್ರೆ ಅವರಣದಲ್ಲಿ ಆಯೋಜನೆ ಮಾಡಲಾದ ಕಾರ್ಯಕ್ರಮದಲ್ಲಿ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಸಚಿವರು. ಮಾನ್ಯ ದೀನೇಶ ಗುಂಡುರಾವ್ ಮಾತನಾಡಿ ಉತ್ಕ್ರಷ್ಟ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಎಲ್ಲಾ ವಿಧವಾದ ಚಿಕಿತ್ಸೆ ಹಾಗೂ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ದೊರೆಯುವಂತೆ ನೋಡಿಕೊಳ್ಳಲಾಗುವುದೆಂದರು.

ಈ ಹಿಂದೆ 250 ರಿಂದ 300 ಅಗತ್ಯ ಔಷಧಿಗಳು ದೊರೆಯುತಿದ್ದು, ಅವುಗಳ ಸಂಖ್ಯೆಯನ್ನು 1 ಸಾವಿರಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.

ದೊಡ್ಡಬಳ್ಳಾಪುರ ನೂತನ ಡಯಾಲಿಸಿಸ್ ಕೇಂದ್ರಕ್ಕೆ 1.5 ಕೋಟಿ ವೆಚ್ಚದ ಉಪಕರಣಗಳು ಹಾಗೂ ಪ್ರತಿ ವರ್ಷ ಮಾನವ ಸಂಪನ್ಮೂಲಗಳಿಗೆ 50 ಲಕ್ಷ ಒದಗಿಸಲಾಗುವುದೆಂದರು. ಈಗಾಗಲೇ ನೆಲಮಂಗಲ ತಾಲೂಕು ಕೇಂದ್ರಕ್ಕೆ ತಾಲೂಕು ಆಸ್ಪತ್ರೆ ಮಂಜೂರಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಪೂರ್ಣ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಾಗುವುದೆಂದರು.

ಇತ್ತೀಚೆಗೆ ಬಿಪಿ,ಶುಗರ್ ಪ್ರಕರಣಗಳಲ್ಲಿ ಹೆಚ್ಚಳವಾಗುತಿದ್ದು, ಮನೆ ಮನೆಗೆ ತೆರಳಿ ಪರೀಕ್ಷಿಸುವ ಯೋಜನೆ ಜಾರಿಗೆ‌ತರಲಾಗುತ್ತಿದೆ. ಈ ಖಾಯಿಲೆಗಳು ಮುಂದಿನ ದಿನಗಳಲ್ಲಿ ಬೇರೆ ಬೇರೆ ಖಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ  ರಾಜ್ಯಾದ್ಯಂತ 8 ಸಾವಿರ ಡಯಾಲಿಸಿಸ್ ಯಂತ್ರಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ನೀಡಲಾಗಿದೆ ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಮಾತನಾಡಿ, ಶೇ. 80 ರಷ್ಟು ಜನ ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದು, ಸರ್ಕಾರ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಗಳನ್ನು ನೀಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಎಜಾಕ್ಸ್ ಸಂಸ್ಥೆಯು ಉತ್ತಮ ಕೆಲಸ ಮಾಡುತಿದ್ದು, ಶಿಕ್ಷಣ ಕ್ಷೇತ್ರಕ್ಕೂ ಉತ್ತಮ ಕೆಲಸಗಳನ್ನು ಮಾಡುತ್ತಿದೆ ಎಂದರು. ಜಿಲ್ಲೆಯ ಹಲವಾರು ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಡಿಹೆಚ್ಒ ಪಟ್ಟಿ ನೀಡಿದ್ದು ಅವುಗಳ ಮೇಲ್ದರ್ಜೆಗೆ ಸಚಿವರು ಸಮ್ಮತಿಸಿದ್ದಾರೆಂದರು.

ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರದ ಮಾಜಿ ಶಾಸಕ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ, ಉಪಾಧ್ಯಕ್ಷರಾದ ಮಲ್ಲೇಶ್, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ, ಆರೋಗ್ಯ ಇಲಾಖೆಯ ನಿರ್ದೇಶಕರಾದ ತ್ರಿವೇಣಿ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಅಜಾಕ್ಸ್ ಸಂಸ್ಥೆಯ ಮುಖ್ಯಸ್ಥರಾದ ವಿಜಯ್ ಹಾಜರಿದ್ದರು.

 

 

- Advertisement -  - Advertisement -  - Advertisement - 
Share This Article
error: Content is protected !!
";