ಸರಸ್ವತಿ ಕಾನೂನು ಕಾಲೇಜಿನಲ್ಲಿಂದು ಇಕೋ ಕ್ಲಬ್ ಹಾಗೂ ಕ್ರೀಡಾ ಚಟುವಟಿಕೆ ಉದ್ಘಾಟನೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಸರಸ್ವತಿ ಕಾನೂನು ಕಾಲೇಜಿನ ರಜತ ಮಹೋತ್ಸವ ಸಭಾಂಗಣದಲ್ಲಿ ವಿದ್ಯಾರ್ಥಿ ಕಾನೂನು ವೇದಿಕೆ
, ರಾಷ್ಟ್ರೀಯ ಸೇವಾ ಯೋಜನೆ, ಮಾನವ ಹಕ್ಕುಗಳ ವೇದಿಕೆ, ರೆಡ್‌ಕ್ರಾಸ್ ಘಟಕ, ಇಕೋ ಕ್ಲಬ್ ಹಾಗೂ ಕ್ರೀಡಾ ಚಟುವಟಿಕೆ ಕಾರ್ಯಕ್ರಮಗಳ ಉದ್ಘಾಟನಾ

ಸಮಾರಂಭ ಅ.೧೬ ರ ಗುರುವಾರ ಬೆಳಿಗ್ಗೆ ೧೦-೩೦ ಕ್ಕೆ ನಡೆಯಲಿದೆ. ತುಮಕೂರು ವಿಶ್ವವಿದ್ಯಾನಿಲಯ ಪರೀಕ್ಷಾಂಗ ಕುಲಸಚಿವ ಪ್ರೊ.ಸತೀಶ್‌ಗೌಡ ಎನ್. ಸಮಾರಂಭ ಉದ್ಘಾಟಿಸಲಿದ್ದಾರೆ.

- Advertisement - 

ವಿಶೇಷ ಆಹ್ವಾನಿತರಾಗಿ ಬೆಂಗಳೂರು ವಿವೇಕಾನಂದ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಬಿ.ಕೆಂಪೆಗೌಡ, ಮುಖ್ಯ ಅತಿಥಿಗಳಾಗಿ ಸರಸ್ವತಿ ವಿದ್ಯಾಸಂಸ್ಥೆ ಅಧ್ಯಕ್ಷರಾದ ಹೆಚ್.ಹನುಮಂತಪ್ಪ, ಉಪಾಧ್ಯಕ್ಷ ಫಾತ್ಯರಾಜನ್, ಕಾರ್ಯದರ್ಶಿ ಡಿ.ಕೆ.ಶೀಲಾ ಇವರುಗಳು ಪಾಲ್ಗೊಳ್ಳುವರು. ಸರಸ್ವತಿ ಕಾನೂನು ಕಾಲೇಜು ಪ್ರಾಂಶುಪಾಲರಾದ ಪ್ರೊ.ಎಂ.ಎಸ್.ಸುಧಾದೇವಿ ಅಧ್ಯಕ್ಷತೆ ವಹಿಸಲಿದ್ದಾರೆ.

 

- Advertisement - 

 

Share This Article
error: Content is protected !!
";