ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿಕ್ಕಮಗಳೂರಿನ ಆಶಾಕಿರಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ, ಆಶಾಕಿರಣ ಅಂಧ ಮಕ್ಕಳ ವಸತಿಯುತ ಪಾಠಶಾಲಾ ಆವರಣದಲ್ಲಿ, ನಿರ್ಮಿಸಿರುವ ಕಾವೇರಿ ವಸತಿ ಗೃಹದ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ್ ಶಾಸಕ ಸಿ.ಟಿ ರವಿ ಪಾಲ್ಗೊಂಡಿದ್ದರು.
ಆದಿಚುಂಚನಗಿರಿ ಶಾಖಾ ಮಠ ಶೃಂಗೇರಿಯ ಶ್ರೀ ಗುಣನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಮಾರಂಭದಲ್ಲಿ, ಆಶಾಕಿರಣ ಅಂಧ ಮಕ್ಕಳ ಪಾಠಶಾಲೆಯ ಅಧ್ಯಕ್ಷರಾದ ಡಾ. ಜೆ.ಪಿ ಕೃಷ್ಣೇಗೌಡ, ಆಡಳಿತ ಮಂಡಳಿಯ ಗೌರವಾನ್ವಿತ ಸದಸ್ಯರು, ಆಶಾಕಿರಣ ಅಂಧ ಮಕ್ಕಳ ಪಾಠಶಾಲೆಯ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.