ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಇವರ ಸಂಯುಕ್ತಾಶ್ರಯದಲ್ಲಿ “ಕೌಶಲ್ಯ ರೋಜಗಾರ್ ಮೇಳ”, ಉದ್ಯೋಗ ಮೇಳ ಕಾರ್ಯಕ್ರಮ ಮಾ. 01 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ನಡೆಯಲಿದೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ಗೋವಿಂದ ಕಾರಜೋಳ ಘನ ಉಪಸ್ಥಿತಿ ವಹಿಸುವರು. ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಅಧ್ಯಕ್ಷತೆ ವಹಿಸುವ
ಈ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಬಿ.ಜಿ. ಗೋವಿಂದಪ್ಪ, ಟಿ. ರಘುಮೂರ್ತಿ, ಎನ್.ವೈ. ಗೋಪಾಲಕೃಷ್ಣ, ಎಂ. ಚಂದ್ರಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್, ಡಿ.ಟಿ. ಶ್ರೀನಿವಾಸ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಿವಕಾಂತಮ್ಮ ನಾಯಕ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ. ಬಿ. ಯೋಗೇಶ್ ಬಾಬು, ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್. ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ಪೀರ್, ನಗರಸಭೆ ಅಧ್ಯಕ್ಷೆ ಬಿ.ಎನ್. ಸುಮಿತಾ ರಾಘವೇಂದ್ರ ಸೇರಿದಂತೆ ವಿವಿಧ ಗಣ್ಯರು, ಉನ್ನತ ಅಧಿಕಾರಿಗಳು ಭಾಗವಹಿಸುವರು.