ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ, ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ,
ರಾಜ್ಯ ನಿವೃತ್ತ ನೌಕರರ ಜಿಲ್ಲಾ ಸಂಘ, ಹೊಂಬೆಳಕು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಇವರುಗಳ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ 13ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯ ಲೋಕಾಯುಕ್ತ ಕಚೇರಿ ಹಿಂಭಾಗದ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ “ಹಿರಿಯ ನಾಗರಿಕರ ಕಾನೂನು ಸಲಹಾ ಕೇಂದ್ರ” ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ರೋಣ ವಾಸುದೇವ್ ಉದ್ಘಾಟನೆ ನೆರವೇರಿಸುವರು. ಉಪವಿಭಾಗಾಧಿಕಾರಿ ಮಹೆಬೂಬ್ ಜೀಲಾನಿ ಖುರೇಷಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಹೆಚ್.ವಿಜಯ್ ಕುಮಾರ್, ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಬಿ.ಎಂ.ಅನಿಲ್ ಕುಮಾರ್, ಕಾರ್ಯದರ್ಶಿ ಆರ್.ಗಂಗಾಧರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ,
ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರೇಮನಾಥ್, ಹಿರಿಯ ನಾಗರಿಕರ ಜಿಲ್ಲಾ ಸಂಘ ಅಧ್ಯಕ್ಷ ರಂಗಪ್ಪ ರೆಡ್ಡಿ, ಬಸವೇಶ್ವರ ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಶಂಕರಪ್ಪ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

