ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಕೃಷಿ ತಂತ್ರಜ್ಞರ ಸಂಸ್ಥೆ ಪ್ರಾದೇಶಿಕ ಘಟಕ ರಜತ ಮಹೋತ್ಸವ ಭವನದ ಉದ್ಘಾಟನಾ ಸಮಾರಂಭ ಇದೇ ಏ.21ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರ ಎಪಿಎಂಸಿ ಆವರಣದ ‘ಇ’ ಬ್ಲಾಕ್ನಲ್ಲಿ ಹಮ್ಮಿಕೊಳ್ಳಲಾಗಿದೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರಜತ ಮಹೋತ್ಸವ ಭವನ ಉದ್ಘಾಟನೆ ನೆರವೇರಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಮಾರಂಭ ಉದ್ಘಾಟಿಸುವರು. ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಅಶೋಕ ಎಂ.ದಳವಾಯಿ ಉಪನ್ಯಾಸ ನೀಡುವರು. ಚಿತ್ರದುರ್ಗ ಕೃಷಿ ತಂತ್ರಜ್ಞರ ಸಂಸ್ಥೆ ಪ್ರಾದೇಶಿಕ ಘಟಕದ ಅಧ್ಯಕ್ಷ ಜಿ.ಸಿ.ರಂಗಸ್ವಾಮಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಿವೃತ್ತ ಕೃಷಿ ನಿರ್ದೇಶಕರು ಹಾಗೂ ಬೆಂಗಳೂರು ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷೆ ನಂದಿನಿ ಕುಮಾರಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಂಟಿ ಕೃಷಿ ನಿರ್ದೇಶಕರು ಹಾಗೂ
ಚಿತ್ರದುರ್ಗ ಕೃಷಿ ತಂತ್ರಜ್ಞರ ಸಂಸ್ಥೆ ಪ್ರಾದೇಶಿಕ ಘಟಕ ಗೌರವಾಧ್ಯಕ್ಷ ಬಿ.ಮಂಜುನಾಥ್, ಸಂಸ್ಥಾಪಕ ಅಧ್ಯಕ್ಷ ಹಾಗೂ ದಿ ಮಚೆಂಟ್ಸ್ ಸೌಹಾರ್ದ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಸ್.ಆರ್.ಲಕ್ಷ್ಮೀಕಾಂತರೆಡ್ಡಿ, ಸಂಸ್ಥಾಪನ ಸದಸ್ಯ ಕೆ.ಹೆಚ್.ಸೀತಾರಾಮರೆಡ್ಡಿ, ನಿವೃತ್ತ ವಿಸ್ತರಣಾ ನಿರ್ದೇಶಕರು ಹಾಗೂ ಪ್ರೇರಕ ಡಾ.ವಿ.ವೀರಭದ್ರಯ್ಯ, ಬಬ್ಬೂರು ಫಾರಂ ತೋಟಗಾರಿಕೆ ಮಹಾವಿದ್ಯಾಲಯ ಡೀನ್ ಡಾ.ಸುರೇಶ್ ಡಿ.ಏಕಬೋಟೆ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಸಹ ಸಂಶೋಧನಾ ನಿರ್ದೇಶಕ ಡಾ.ಶರಣಪ್ಪ ಜಂಗಂಡಿ,
ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ.ಓ.ಕುಮಾರ್, ಇಆರ್ಎಂ ಸಮೂಹ ಸಿ.ಎಸ್.ಆರ್ ಮುಖ್ಯಸ್ಥ ಮಂಜುನಾಥ್, ಬೆಂಗಳೂರು ಕೃಷಿ ತಂತ್ರಜ್ಞರ ಸಂಸ್ಥೆ ಉಪಾಧ್ಯಕ್ಷ ಎಂ.ಮಹಾಂತೇಶಪ್ಪ, ಕಾರ್ಯದರ್ಶಿ ವೀರಣ್ಣ ಕೆ.ಕಮತರ, ಚಿತ್ರದುರ್ಗ ಕೃಷಿ ತಂತ್ರಜ್ಞರ ಸಂಸ್ಥೆ ಪ್ರಾದೇಶಿಕ ಘಟಕ ಕಟ್ಟಡ ಸಮಿತಿ ಅಧ್ಯಕ್ಷ ಇ.ಜಯರಾಮರೆಡ್ಡಿ, ಸದಸ್ಯರಾದ ಜಿ.ಚಿದಾನಂದಪ್ಪ, ಜೆ.ತಿಪ್ಪೇಸ್ವಾಮಿ ಭಾಗವಹಿಸುವರು ಎಂದು ಚಿತ್ರದುರ್ಗ ಕೃಷಿ ತಂತ್ರಜ್ಞರ ಸಂಸ್ಥೆ ಪ್ರಾದೇಶಿಕ ಘಟಕ ಕಾರ್ಯದರ್ಶಿ ಜಿ.ಟಿ.ವೀರಭದ್ರರೆಡ್ಡಿ ಹಾಗೂ ಉಪಾಧ್ಯಕ್ಷ ಕಟ್ಟಾ ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.