ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅರಾಜಕತೆ ತಾಂಡವಾಡುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಈ ಆಘಾತಕಾರಿ ವರದಿಯೇ ಸಾಕ್ಷಿ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.
ರಾಜ್ಯದಲ್ಲಿ ಅಪ್ರಾಪ್ತೆಯರು, ಮಕ್ಕಳ ಮೇಲಿನ ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.
2023ರಲ್ಲಿ 3,898, 2024ರಲ್ಲಿ 3,900ಕ್ಕೂ ಹೆಚ್ಚು ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ರಾಜಧಾನಿ ಬೆಂಗಳೂರಿನಲ್ಲೇ ಅತಿ ಹೆಚ್ಚು ಪ್ರಕರಣಗಳು ನಡೆದಿರುವುದು ರಾಜ್ಯದ ಜನರಲ್ಲಿ ಭಯ ಹುಟ್ಟಿಸುತ್ತಿದೆ ಎಂದು ಜೆಡಿಎಸ್ ತಿಳಿಸಿದೆ.
ಸಿದ್ದರಾಮಯ್ಯ ಸರ್ಕಾರ ಆಂತರಿಕ ಕಚ್ಚಾಟದಲ್ಲಿ ಬ್ಯುಸಿಯಾಗಿದ್ದು, ಕಣ್ಣು ಕಾಣದಂತೆ, ಕಿವಿ ಕೇಳದಂತೆ ಕಿವುಡಾಗಿದ್ದು, ರಾಜ್ಯದ ಮಹಿಳೆಯರು, ಮಕ್ಕಳಿಗೆ ರಕ್ಷಣೆ ಇಲ್ಲವಾಗಿದೆ ಎಂದು ಜೆಡಿಎಸ್ ಹರಿಹಾಯ್ದಿದೆ.