ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ನಗರದ ತಾಲ್ಲೂಕು ಕಚೇರಿ ಮುಂಭಾಗ ಸೆ.26 ರಿಂದ ಎಲ್ಲಾ ಬಗೆಯ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಗಳನ್ನು ಸ್ಥಗಿತಗೊಳಿಸುವ ಮೂಲಕ ಗ್ರಾಮ ಆಡಳಿತ ಅಧಿಕಾರಿಗಳು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.
ರಾಜ್ಯವ್ಯಾಪಿ ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಸಮೂಹದ ಬೇಡಿಕೆಗಳನ್ನು ಈಡೇರಿಸಿ ಉತ್ತಮ ಮತ್ತು ಗುಣಮಟ್ಟದ ರೀತಿಯಲ್ಲಿ ಸಾರ್ವಜನಿಕ ಮತ್ತು ಸರ್ಕಾರಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡಬೇಕೆಂದು ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಈ ಕುರಿತು ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಶ್ರೀಮಂತ ಮಾತನಾಡಿ ಗ್ರಾಮ ಆಡಳಿತ ಅಧಿಕಾರಿಗಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದೇವೆ. ಸೂಕ್ತ ನಿಗದಿತ ಕಚೇರಿ ಇಲ್ಲ, ಕರ್ತವ್ಯ ನಿರ್ವಹಿಸಲು ಅಗತ್ಯ ಮೊಬೈಲ್, ಲ್ಯಾಪ್ ಟ್ಯಾಪ್, ಇಂಟರ್ನೆಟ್ ವ್ಯವಸ್ಥೆ, ಸೇರಿದಂತೆ ಯಾವ ಸೌಲಭ್ಯಗಳು ಸೂಕ್ತ ಸಮಯದಲ್ಲಿ ದೊರೆಯುತ್ತಿಲ್ಲ.
ಅತ್ಯಂತ ಒತ್ತಡದ ಪರಿಸ್ಥಿತಿಯಲ್ಲಿ ನಾವು ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಸರ್ಕಾರಿ ಕೆಲಸ ಮಾಡಲು ನಾವು ಸದಾ ಸಿದ್ಧ ಆದರೆ ಸೂಕ್ತ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಸರ್ಕಾರ ಮುಂದಾಗಬೇಕಿದೆ, ಸೂಕ್ತ ಸೌಲಭ್ಯ ಕಲ್ಪಿಸುವವರೆಗೂ ನಮ್ಮ ಈ ಮುಷ್ಕರ ನಿಲ್ಲಿಸುವುದಿಲ್ಲ ರಾಜ್ಯಾದ್ಯಂತ ನಮ್ಮ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರಕ್ಕೆ ಮುಂದಾಗಿದ್ದು ಸರ್ಕಾರ ಈ ಕೂಡಲೇ ಎಚ್ಚೆದ್ದು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು .
ಏನಿದೆ ಮೂಲಭೂತ ಸೌಲಭ್ಯ ಕುರಿತ ಬೇಡಿಕೆಗಳು…????
1.ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಛೇರಿ
2.ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತು ಅಲ್ಮೆರಾ
3.ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್ (12ಜಿಬಿ/256ಜಿಬಿ), ಸಿಯುಜಿ ಸಿಮ್ ಮತ್ತು ಡೇಟಾ
4.ಗೂಗಲ್ ಕ್ರೋಮ್ ಬುಕ್/ ಲ್ಯಾಪ್ ಟಾಪ್
5.ಪ್ರಿಂಟರ್ ಮತ್ತು ಸ್ಕ್ಯಾನರ್ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಗ್ರಾಮ ಆಡಳಿತ ಅಧಿಕಾರಿಗಳು ಅಗ್ರಹಿಸಿದ್ದಾರೆ.
ಮುಷ್ಕರದಲ್ಲಿ ತಾಲ್ಲೂಕು ಅಧ್ಯಕ್ಷ ಶ್ರೀಮಂತ ಎಸ್ ಆಸಂಗಿಹಾಳ್,ಉಪಾಧ್ಯಕ್ಷ ಕಿರಣ್ ಕುಮಾರ್.
ಕಂದಾಯ ನೌಕರರ ಸಂಘದ ಅಧ್ಯಕ್ಷ ಬಿಸಿ ಶಿವಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಲಮಾಣಿ, ಉಪ ತಹಶೀಲ್ದಾರ್ ವಿನೋದ್ ಕಂದಾಯ ನಿರೀಕ್ಷಕರು – ಎಸ್.ಐ ಅನಂತಕುಮಾರ್ , ಶಿವಪ್ರಸಾದ್ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ನರಸಿಂಹಮೂರ್ತಿ, ಸೇರಿದಂತೆ ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.