ಜಾಲಪ್ಪ ಲಯನ್ಸ್ ಸಂಸ್ಥೆಯಿಂದ ಸ್ವಾತಂತ್ರ್ಯೋತ್ಸವ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
 ಇಲ್ಲಿನ ಲಯನ್ಸ್‌ ಕ್ಲಬ್‌ ಆಫ್‌ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನಿಂದ 79ನೇ ಸ್ವಾತಂತ್ರ್ಯ ದಿನವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು.

ಶ್ರೀದೇವರಾಜ್‌ ಅರಸ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಧ್ವಜಾರೋಹಣ ನೆರವೇರಿಸಿದರು. ಅವರು ಮಾತನಾಡಿ, ದೇಶದಲ್ಲಿ ಸಮಗ್ರತೆ ಮತ್ತು ಐಕ್ಯತೆ ಚಿಂತನೆಗಳು ಪ್ರಬಲಗೊಳ್ಳಬೇಕು. ಸಹಬಾಳ್ವೆಯ ಆದರ್ಶವನ್ನು ಎಲ್ಲರೂ ಪಾಲಿಸುವಂತಾದರೆ ಮಾತ್ರ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಇರುತ್ತದೆ ಎಂದರು.

- Advertisement - 

ವಿವಿಧ ಸೇವಾಕಾರ್ಯ:
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಯನ್ಸ್‌ ಕ್ಲಬ್‌ನಿಂದ ವಿದ್ಯಾರ್ಥಿ ವೇತನ ವಿತರಣೆ, ನೋಟ್‌ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳ ವಿತರಣೆ, ಪ್ರತಿಭಾ ಪುರಸ್ಕಾರ ಸೇರಿದಂತೆ ವಿವಿಧ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.

ಲಯನ್ಸ್‌ ಕ್ಲಬ್ ಅಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್ ಅಧ್ಯಕ್ಷತೆ ವಹಿಸಿದ್ದರು. ಜಿಎಂಟಿ ಸಂಯೋಜಕ ಎಂ.ಆರ್.ಶ್ರೀನಿವಾಸ್, ಕಿರುತೆರೆ ನಟರಾದ ಅರವಿಂದ್‌, ಅಮೃತ ನಾಯ್ಡು, ಲಯನ್ಸ್‌ ಕ್ಲಬ್‌ ಖಜಾಂಚಿ ಕೆ.ಸಿ.ನಾಗರಾಜ್, ಉಪಾಧ್ಯಕ್ಷ ಬಾಬುಸಾಬಿ ಸೇರಿದಂತೆ ವಿವಿಧ ಸಮಿತಿಗಳ ಮುಖ್ಯಸ್ಥರು, ಲಯನ್ಸ್‌ ಸದಸ್ಯರು ಹಾಜರಿದ್ದರು.

- Advertisement - 

 

Share This Article
error: Content is protected !!
";