ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳೆಯುತ್ತಿರುವ ಕರ್ನಾಟಕಕ್ಕೆ ವೈಮಾನಿಕ ಬಲ ಕೇಂದ್ರ ವಿಮಾನಯಾನ ಸಚಿವರೊಂದಿಗೆ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಚರ್ಚಿಸಿದರು.
ರಾಜ್ಯದ ವೈಮಾನಿಕ ವಲಯದ ಉಜ್ವಲ ಭವಿಷ್ಯ ರೂಪಿಸಲು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಎಂ.ಎನ್.ಕೆ ರಾಂ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ವಿಸ್ತೃತ ಚರ್ಚೆ ನಡೆಸಿದೆ. ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ಆಖೈರು, ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಒಪ್ಪಿಗೆ, ಹಾಗೂ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ವುದು ಸೇರಿದಂತೆ ರಾಜ್ಯದ ವೈಮಾನಿಕ ವಲಯದ ಪ್ರಮುಖ ಬೇಡಿಕೆಗಳನ್ನು ಮನವರಿಕೆ ಮಾಡಿಕೊಡಲಾಯಿತು ಎಂದು ಎಂ.ಬಿ ಪಾಟೀಲ್ ತಿಳಿಸಿದರು.
ಈ ಮಾತುಕತೆಗಳ ಫಲವಾಗಿ, ವಾಯು ಸಂಚಾರ ಸಾಮರ್ಥ್ಯ ಹೆಚ್ಚಳವಾಗುವುದರ ಜೊತೆಗೆ ಹೂಡಿಕೆ ಆಕರ್ಷಣೆಗೆ ದಾರಿ ತೆರೆದು ಆರ್ಥಿಕ ಪ್ರಗತಿಗೆ ಉತ್ತೇಜನ ಸಿಗಲಿದೆ.
ಉತ್ತರ ಕರ್ನಾಟಕ ಮತ್ತು ಸುತ್ತಮುತ್ತಲಿನ ರಾಜ್ಯಗಳಿಗೆ ವಿಮಾನ ಸಂಪರ್ಕ ಸುಲಭವಾಗುವ ಮೂಲಕ ಪ್ರವಾಸೋದ್ಯಮ, ಉದ್ಯಮ, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಲಿದೆ. ಪ್ರಾದೇಶಿಕ ಸಮತೋಲನದೊಂದಿಗೆ ರಾಜ್ಯದ ಸಮಗ್ರ ಅಭಿವೃದ್ಧಿ ಮುಂದುವರಿಯಲು ಇದರಿಂದ ಅನುಕೂಲವಾಗಲಿದೆ ಎಂದು ಎಂ.ಬಿ ಪಾಟೀಲ್ ತಿಳಿಸಿದರು.

