15ನೇ ಹಣಕಾಸು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ವಿರುದ್ಧದ ಕೇಂದ್ರ ಸರ್ಕಾರದ ತಾರತಮ್ಯ ನೀತಿಯಿಂದ 14 ನೇ ಹಣಕಾಸು ಆಯೋಗದಿಂದ 15ನೇ ಹಣಕಾಸು ಆಯೋಗಕ್ಕೆ ರಾಜ್ಯಕ್ಕೆ ಹಂಚಿಕೆಯಾಗುತ್ತಿದ್ದ ಅನುದಾನದಲ್ಲಿ 80 ಸಾವಿರ ಕೋಟಿಯಷ್ಟು ನಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

- Advertisement - 

ರಾಜ್ಯದ ಬಿಜೆಪಿ ಸಂಸದರು ಮೌನವಹಿಸಿರುವುದರಿಂದ ಕೇಂದ್ರದ ತಾರತಮ್ಯ ಧೋರಣೆ ಮುಂದುವರಿದಿದೆ. ಈ ಕಾರಣಕ್ಕಾಗಿಯೇ ಮುಖ್ಯಮಂತ್ರಿ ಸಿದ್ದಾರಯ್ಯ ಅವರು ಕೇಂದ್ರದ ಅನ್ಯಾಯದ ವಿರುದ್ಧ ಧ್ವನಿಯೆತ್ತಿದ್ದಾರೆ.

- Advertisement - 

ಮಂಗಳವಾರ ದೆಹಲಿಗೆ ಭೇಟಿ ನೀಡಿ, ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ರಾಜ್ಯ ಸರ್ಕಾರದ ಏಳು ಬಿಲ್ಲುಗಳ ಮಹತ್ವವನ್ನು ರಾಷ್ಟ್ರಪತಿಗಳಿಗೆ ಮನವರಿಕೆ ಮಾಡಿಕೊಟ್ಟು ಶೀಘ್ರ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ.

ಅಲ್ಲದೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ನ್ಯಾಯಯುತವಾಗಿ ತೆರಿಗೆ ಪಾಲನ್ನು ಹಂಚಿಕೆ ಮಾಡುವಂತೆ ಕೋರಿದ್ದಾರೆ.

- Advertisement - 

ಕನ್ನಡ ನಾಡಿನ ಹಿತ ಕಾಯಲು, ಕನ್ನಡಿಗರ ಹಕ್ಕುಗಳನ್ನು ರಕ್ಷಿಸಲು ನಮ್ಮ ಸರ್ಕಾರ ಸದಾ ಸಿದ್ಧ ಎಂದು ಸಿದ್ದರಾಮಯ್ಯ ಹೇಳಿದರು.

 

 

Share This Article
error: Content is protected !!
";