ಉಪಲೋಕಾಯುಕ್ತರಿಂದ ಬಾಕಿ ಪ್ರಕರಣಗಳ ವಿಚಾರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಉಪ ಲೋಕಾಯುಕ್ತರ ಕಾರ್ಯ ವ್ಯಾಪ್ತಿಗೆ ಒಳಪಡುವಂತಹವು) ಪ್ರಕರಣಗಳಲ್ಲಿ ತನಿಖೆ
, ವಿಚಾರಣೆಗೆ ಬಾಕಿ ಇರುವವುಗಳನ್ನು ದೂರುದಾರರು ಹಾಗೂ

ಎದುರುದಾರರ ಸಮ್ಮುಖದಲ್ಲಿ ಜಿ.ಪಂ.ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಸೆಪ್ಟೆಂಬರ್ ೨೫ ರಂದು ನ್ಯಾಯಮೂರ್ತಿ ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ಕಾನೂನು ರೀತಿಯಲ್ಲಿ ವಿಚಾರಣೆ ನಡೆಸಲಿದ್ದಾರೆ ಎಂದು ಚಿಕ್ಕಮಗಳೂರು ಹಾಗೂ ಮೂಡಿಗೆರೆ ತಾಲ್ಲೂಕು ತಹಶೀಲ್ದಾರರುಗಳು ತಿಳಿಸಿದ್ದಾರೆ.

- Advertisement - 

ಸೆಪ್ಟೆಂಬರ್ ೨೪ ರಿಂದ ೨೬ರವರೆಗೆ ಜಿಲ್ಲೆಯಲ್ಲಿ ಉಪಲೋಕಾಯುಕ್ತರು ಪ್ರವಾಸ ಕೈಗೊಂಡಿರುವ ಸಂದರ್ಭ ೨೪ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧.೩೦ ರವರೆಗೆ ಹಾಗೂ ಮಧ್ಯಾಹ್ನ ೨.೩೦ ರಿಂದ ಸಂಜೆ ೫ ಗಂಟೆಯವರೆಗೆ ಕುವೆಂಪು ಕಲಾಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಹಾಗೂ ವಿಚಾರಣೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿಗಳು, ನೌಕರರು ನ್ಯಾಯಯುತವಾಗಿ ನಡೆಸಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ರೀತಿಯ ದುರಾಡಳಿತದಲ್ಲಿ ತೊಡಗಿದ್ದರೆ,

ಅಂಥ ಪ್ರಕರಣಗಳಲ್ಲಿ ಸಾರ್ವಜನಿಕರು ಉಪಲೋಕಾಯುಕ್ತರ ಮುಂದೆ ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ ೧ ಮತ್ತು ೨ ರಲ್ಲಿ ಲಿಖಿತ ರೂಪದಲ್ಲಿ ದಾಖಲೆ, ಸಾಕ್ಷ್ಯಾಧಾರಗಳೊಂದಿಗೆ ಸಲ್ಲಿಸಬಹುದು. ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಅವರು ಕೋರಿದ್ದಾರೆ.

- Advertisement - 

 

 

 

Share This Article
error: Content is protected !!
";