ಉಪಲೋಕಾಯುಕ್ತರಿಂದ ಬಾಕಿ ಪ್ರಕರಣಗಳ ವಿಚಾರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಉಪ ಲೋಕಾಯುಕ್ತರ ಕಾರ್ಯ ವ್ಯಾಪ್ತಿಗೆ ಒಳಪಡುವಂತಹವು) ಪ್ರಕರಣಗಳಲ್ಲಿ ತನಿಖೆ
, ವಿಚಾರಣೆಗೆ ಬಾಕಿ ಇರುವವುಗಳನ್ನು ದೂರುದಾರರು ಹಾಗೂ

ಎದುರುದಾರರ ಸಮ್ಮುಖದಲ್ಲಿ ಜಿ.ಪಂ.ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಸೆಪ್ಟಂಬರ್ ೨೫ ರಂದು ಗೌರವಾನ್ವಿತ ನ್ಯಾಯಮೂರ್ತಿ ಉಪಲೋಕಾಯುಕ್ತರಾದ ಶ್ರೀ ಕೆ.ಎನ್.ಫಣೀಂದ್ರ ಅವರು ಕಾನೂನು ರೀತಿಯಲ್ಲಿ ವಿಚಾರಣೆ ನಡೆಸಲಿದ್ದಾರೆ.

- Advertisement - 

ಸೆಪ್ಟೆಂಬರ್ ೨೪ ರಿಂದ ೨೬ರವರೆಗೆ ಜಿಲ್ಲೆಯಲ್ಲಿ ಉಪಲೋಕಾಯುಕ್ತರು ಪ್ರವಾಸ ಕೈಗೊಂಡಿರುವ ಸಂದರ್ಭ ೨೪ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧.೩೦ ರವರೆಗೆ ಹಾಗೂ ಮಧ್ಯಾಹ್ನ ೨.೩೦ ರಿಂದ ಸಂಜೆ ೫ ಗಂಟೆಯವರೆಗೆ ಕುವೆಂಪು ಕಲಾಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಹಾಗೂ ವಿಚಾರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿಗಳು, ನೌಕರರು ನ್ಯಾಯಯುತವಾಗಿ ನಡೆಸಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ರೀತಿಯ ದುರಾಡಳಿತದಲ್ಲಿ ತೊಡಗಿದ್ದರೆ,

- Advertisement - 

ಅಂಥ ಪ್ರಕರಣಗಳಲ್ಲಿ ಸಾರ್ವಜನಿಕರು ಉಪಲೋಕಾಯುಕ್ತರ ಮುಂದೆ ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ ೧ ಮತ್ತು ೨ ರಲ್ಲಿ ಲಿಖಿತ ರೂಪದಲ್ಲಿ ದಾಖಲೆ, ಸಾಕ್ಷ್ಯಾಧಾರಗಳೊಂದಿಗೆ ಸಲ್ಲಿಸಬಹುದು. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.

 

Share This Article
error: Content is protected !!
";