ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರದ ಹತ್ತಿರ ಹೊಳಲ್ಕೆರೆ ತಾಲ್ಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಾಕ್ ವೆಲ್ ಪಾಯಿಂಟ್ ಮತ್ತು ಹೊಳಲ್ಕೆರೆ ತಾಲ್ಲೂಕಿನ ಹಾಲೇನಹಳ್ಳಿ ಗ್ರಾಮದಲ್ಲಿರುವ ವಾಟರ್ ಟ್ರೀಟ್‌ಮೆಂಟ್ ಪ್ಲಾಂಟ್ ಇರುವ ಜಾಗಕ್ಕೆ ಭೇಟಿ ನೀಡಿ ಭೌತಿಕ ಪ್ರಗತಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ್, ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಪಿಎಂಸಿ ಹಾಗೂ ಎಂವಿಎಸ್ ಗುತ್ತಿಗೆದಾರರು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.