ವಿವಿಧ ಆಹಾರ ಮಾದರಿಗಳ ತಪಾಸಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಸಾರ್ವಜನಿಕರು ಸೇವಿಸುವ ಆಹಾರದ ಗುಣಮಟ್ಟ ಮತ್ತು ಸುರಕ್ಷತಾ ಅಂಶಗಳನ್ನು ಖಾತರಿಪಡಿಸುವ ಮತ್ತು ಆ ಮೂಲಕ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ.

ಆಗಸ್ಟ್-2024ರ ಮಾಹೆಯಲ್ಲಿ ವಿವಿಧ ಆಹಾರ ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಪನ್ನೀರ್‍ನ 221 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದ್ದು, ಅವುಗಳಲ್ಲಿ 220 ಮಾದರಿಗಳು ಸುರಕ್ಷಿತವಾಗಿದ್ದು, 01 ಮಾದರಿಯು Subsಣಚಿಟಿಜಚಿಡಿಜ ಎಂದು ವರದಿಯಾಗಿರುತ್ತದೆ.

ಕೇಕ್ ನ 235 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದ್ದು ಅವುಗಳಲ್ಲಿ 223 ಮಾದರಿಗಳು ಸುರಕ್ಷಿತವಾಗಿದ್ದು, 12 ಮಾದರಿಗಳು Allura Red, Sunset Yellow-FCF, Ponceau 4R, Tartrazine ಕೃತಕ ಬಣ್ಣಗಳನ್ನು ನಿಗದಿತ ಮಾನದಂಡಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬಳಸಿರುವುದರಿಂದ ಅಸುರಕ್ಷಿತ ಎಂದು ವರದಿಯಾಗಿರುತ್ತವೆ.

ಕೋವಾದ 65 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದ್ದು, ಅವುಗಳಲ್ಲಿ 64 ಮಾದರಿಗಳು ಸುರಕ್ಷಿತವಾಗಿದ್ದು, 01 ಮಾದರಿಯು Substandard ಎಂದು ವರದಿಯಾಗಿರುತ್ತದೆ.

ಸೆಪ್ಟೆಂಬರ್-2024ರ ಮಾಹೆಯಲ್ಲಿ ರಾಜ್ಯಾದ್ಯಂತ ರೈಲ್ವೆ ನಿಲ್ದಾಣದಲ್ಲಿರುವ ಆಹಾರ ಮಳಿಗೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ನಿಯಮಾವಳಿಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದರ ಕುರಿತು ಖಚಿತಪಡಿಸಿಕೊಳ್ಳಲು ವಿಶೇಷ ಆಂದೋಲನವನ್ನು ಕೈಗೊಳ್ಳುವ ಮೂಲಕ 142 ಆಹಾರ ಮಳಿಗೆಗಳನ್ನು ತಪಾಸಣೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸ್ಥಾಪಿಸಿರುವ 35 ಹೋಟೆಲ್ ಘಟಕಗಳಲ್ಲಿ ಗ್ರಾಹಕರುಗಳಿಗೆ ಸರಬರಾಜು ಮಾಡಲಾಗುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಲು ಸೆಪ್ಟೆಂಬರ್ 4 ಮತ್ತು 5 ರಂದು 35 ತಪಾಸಣೆ ಮಾಡಲಾಗಿದೆ.

ಸಾರ್ವಜನಿಕರಿಗೆ ಮತ್ತು ಆಹಾರ ಉದ್ದಿಮೆದಾರರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಜರುಗಿಸಲಾಗುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";