4 ಲಕ್ಷ ಲಂಚ ಸ್ವೀಕರಿಸಿದ ಇನ್ಸ್​ಪೆಕ್ಟರ್ ಗೋವಿಂದರಾಜು ಅಮಾನತು

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
4 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಗೋವಿಂದರಾಜು ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ.

ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಗೋವಿಂದರಾಜು ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಗುರುವಾರ ಮೈಸೂರು ರಸ್ತೆಯ ಸಿಎಎಆರ್ ಮೈದಾನ ಬಳಿ ಪೊಲೀಸ್ ಸಮವಸ್ತ್ರದಲ್ಲಿಯೇ ಲಂಚ ಪಡೆಯುತ್ತಿದ್ದಾಗ ಇನ್ಸ್​ಪೆಕ್ಟರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.

- Advertisement - 

 ಟ್ರ್ಯಾಪ್​ಗೆ ಒಳಗಾಗುತ್ತಿದ್ದಂತೆ ಗೋವಿಂದರಾಜು ಜೋರಾಗಿ ಚೀರಾಡಿದ್ದರು. ಬಳಿಕ ಸಿನಿಮೀಯ ಶೈಲಿಯಲ್ಲಿ ಅವರನ್ನು ಬಂಧಿಸಲಾಗಿತ್ತು. ಲೋಕಾಯುಕ್ತ ದಾಳಿ ವೇಳೆ ಗೋವಿಂದರಾಜು ಚೀರಾಡಿದ್ದ ವಿಡಿಯೋ ವೈರಲ್ ಆಗಿತ್ತು.

ಗೃಹ ಸಚಿವ ಜಿ.ಪರಮೇಶ್ವರ್ ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ಲಂಚ ಪಡೆದ ಆರೋಪ ಸಂಬಂಧ ಇನ್ಸ್​ಪೆಕ್ಟರ್​ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕೆಲ ದಿನಗಳ ಹಿಂದೆ ವಾರ್ಷಿಕ ಪೊಲೀಸ್ ಸಮ್ಮೇಳನದಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಕೂಡದು ಎಂದು ಎಚ್ಚರಿಸಲಾಗಿತ್ತು. ಪದೇ ಪದೇ ಇಂತಹ ಘಟನೆಯಾದಾಗ ಸರ್ಕಾರಕ್ಕೆ ಹಾಗೂ ವೈಯುಕ್ತಿಕವಾಗಿ ನನಗೂ ಮುಜುಗರವಾಗಲಿದೆ. ಆಗಾಗಿ ಇಂತಹ ಘಟನೆಗಳು ಯಾಕೆ ನಡೆಯುತ್ತದೆ ಎಂಬುದರ ಬಗ್ಗೆ ಅಧ್ಯಯನ ಮಾಡಬೇಕಿದೆ ಎಂದು ಹೇಳಿದರು.

- Advertisement - 

ಪೋಸ್ಟಿಂಗ್ ಕೊಡಲು ಹಣ ಕೊಡುವ ವ್ಯವಸ್ಥೆ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ನನ್ನ ಹಂತದಲ್ಲಿ ಇಂತಹ ವಿಚಾರ ನಡೆಸುವುದಕ್ಕೆ ಬಿಡುವುದಿಲ್ಲ. ನಮಗೆ ಜವಾಬ್ದಾರಿ ಇದೆ. ಜನರಿಗೆ ನಾವು ಉತ್ತರ ಕೊಡಬೇಕು. ಜನ ನಮ್ಮನ್ನು ಗೆಲ್ಲಿಸಿದ್ದಾರೆ‌‌. ಆದಷ್ಟು ಈ ತರಹದ ಘಟನೆ ಆಗದ ರೀತಿ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಏನಿದು ಪ್ರಕರಣ:
ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಈ ಹಿಂದೆ ದಾಖಲಾಗಿದ್ದ ವಂಚನೆ ಪ್ರಕರಣ ಒಂದರಲ್ಲಿ ಮೊಹಮ್ಮದ್ ಅಕ್ಬರ್ ಎಂಬಾತ ಆರೋಪಿಯಾಗಿದ್ದ. ಆ ಪ್ರಕರಣದ ಕುರಿತು ಇನ್ಸ್‌ಪೆಕ್ಟರ್ ಗೋವಿಂದರಾಜು ಅವರು ಬೆದರಿಸಿ 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿರುವುದರ ಕುರಿತು ಲೋಕಾಯುಕ್ತ ಠಾಣೆಯಲ್ಲಿ ದೂರು ದಾಖಲಾಗಿತ್ತು.

 

Share This Article
error: Content is protected !!
";