ಯಗಚಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಮುನ್ನೆಚ್ಚರಿಕೆ ವಹಿಸಲು ಸೂಚನೆ

News Desk

ಯಗಚಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಮುನ್ನೆಚ್ಚರಿಕೆ ವಹಿಸಲು ಸೂಚನೆ
ಚಂದ್ರವಳ್ಳಿ ನ್ಯೂಸ್,
ಚಿಕ್ಕಮಗಳೂರು:
ಯಗಚಿ ಜಲಾನಯನ ಪ್ರದೇಶದಲ್ಲಿ ಮೂಡಿಗೆರೆ, ಬೇಲೂರು ಮತ್ತು ಚಿಕ್ಕಮಗಳೂರು ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, 2025 ಮೇ 25 ರಂದು ಬೆಳಗ್ಗೆ 6.00 ಗಂಟೆಗೆ 500 ಕ್ಯೂಸೆಕ್ಸ್ ನೀರು ಜಲಾಶಯಕ್ಕೆ ಹರಿದು ಬರುತ್ತಿದ್ದು, ಜಲಾಶಯದ ಗರಿಷ್ಠ ನೀರಿನ

- Advertisement - 

ಮಟ್ಟವು 964.60 ಮೀ. (3164.85 ಅಡಿ) ಗಳಾಗಿದ್ದು, ಮೇ 25 ರಂದು ಬೆಳಿಗ್ಗೆ 6-00 ಗಂಟೆಗೆ ನೀರಿನ ಮಟ್ಟವು 964.23 ಮೀ. (9163.639 ಅಡಿ) ಗಳಾಗಿರುತ್ತದೆ. ಪ್ರಸ್ತುತವಾಗಿ ಯಗಚಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಹೆಚ್ಚು ಮಳೆಯಾಗುತ್ತಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದುಬರುವ ಸಾಧ್ಯತೆ ಇರುವುದರಿಂದ ಜಲಾಶಯದಿಂದ ಯಾವುದೇ ಸಮಯದಲ್ಲಾದರೂ ಯಗಚಿ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ ಸಾಧ್ಯತೆ ಇರುತ್ತದೆ.

- Advertisement - 

ಈ ಹಿನ್ನೆಲೆಯಲ್ಲಿ ಯಗಚಿ ನದಿ ಪಾತ್ರ. ನದಿ ದಂಡೆ ಮತ್ತು ನದಿಯ ಆಸು ಪಾಸಿನಲ್ಲಿ ವಾಸಿಸುವ ಎಲ್ಲಾ ಗ್ರಾಮಸ್ಥರು / ಸ್ಥಳೀಯ ವಾಸಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಜನ, ಜಾನುವಾರು

ಹಾಗೂ ಆಸ್ತಿ ಪಾಸ್ತಿ ವಗೈರೆಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಿಕೊಳ್ಳುವುದು ಎಂದು ಬೇಲೂರು ತಾಲೂಕಿನ ಯಗಚಿ ಯೋಜನಾ ವಿಭಾಗದ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ಪುನೀತ್ .ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

Share This Article
error: Content is protected !!
";