ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗೆ ಕೋಟಿ ರೂ. ವಿಮೆ ಸೌಲಭ್ಯ ಜಾರಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅರಣ್ಯ ಇಲಾಖೆ ಅಧಿಕಾರಿಗಳು
, ಸಿಬ್ಬಂದಿಗೆ ಕೋಟಿ ರೂ. ಅಪಘಾತ (ಮರಣ) ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ರೂಪಾಯಿ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅವರು ಮಾಧ್ಯಮ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
ಅರಣ್ಯ ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ಮುಂಚೂಣಿ ಸಿಬ್ಬಂದಿಗಳು ಅಪಾಯ ಎದುರಿಸಿ ಹಗಲಿರುಳು ಶ್ರಮಿಸುತ್ತಿದ್ದು
ಇಲಾಖೆ ಕೆಲವು ಶೌರ್ಯಶಾಲಿ ಹಸಿರು ಯೋಧರ ಕಳೆದುಕೊಂಡಿದೆ. ಇವರೆಲ್ಲರಿಗೂ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಒದಗಿಸಲು ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಖಂಡ್ರೆ ವಿವರಿಸಿದ್ದಾರೆ.

- Advertisement - 

ಹೊರಗುತ್ತಿಗೆ ಸಿಬ್ಬಂದಿಗೂ 20 ಲಕ್ಷ ರೂಪಾಯಿ ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಅರಣ್ಯ ಇಲಾಖೆಯ ಎಲ್ಲಾ ಖಾಯಂ ಉದ್ಯೋಗಿಗಳಿಗೆ, ಅವರ ವೇತನ ಮತ್ತು ಶ್ರೇಣಿಯ ಹೊರತಾಗಿ ಎಲ್ಲರಿಗೂ 1 ಕೋಟಿ ರೂ. ಗಳ ಅಪಘಾತ ಮರಣ ವಿಮೆಯನ್ನು ಬ್ಯಾಂಕ್ ನೀಡುತ್ತದೆ. ಒಂದೊಮ್ಮೆ ಕರ್ತವ್ಯದಲ್ಲಿದ್ದಾಗ ಮೃತಪಟ್ಟರೆ ಹೆಚ್ಚುವರಿಯಾಗಿ 25 ಲಕ್ಷ ರೂ.ಗಳನ್ನು ಬ್ಯಾಂಕ್ ಪಾವತಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಬ್ಯಾಂಕ್ ಆಫ್ ಬರೋಡಾದಲ್ಲಿ ಇಲಾಖೆಯ ನೌಕರರು ಪಿಂಚಣಿ ಖಾತೆಯನ್ನು ಮುಂದುವರಿಸಿದರೆ, ಈ ವೈಯಕ್ತಿಕ ಅಪಘಾತ ವಿಮಾ ರಕ್ಷಣೆಯ ಸೌಲಭ್ಯ 70 ವರ್ಷ ವಯಸ್ಸಿನವರೆಗೆ ಮುಂದುವರಿಯುತ್ತದೆ. ಇದಲ್ಲದೆ, ಖಾಯಂ ಉದ್ಯೋಗಿಗಳಿಗೆ ರೂ.10 ಲಕ್ಷಗಳ ಜೀವ ವಿಮಾ ರಕ್ಷಣೆಯನ್ನು ಸಹ ಬ್ಯಾಂಕ್ ಒದಗಿಸುತ್ತದೆ ಎಂದು ಹೇಳಿದ್ದಾರೆ.

- Advertisement - 

ಅರಣ್ಯ ಇಲಾಖೆ ನೌಕರರು ಮತ್ತು ಅವರ ಕುಟುಂಬಗಳ ಹಿತದೃಷ್ಟಿಯಿಂದ ಬ್ಯಾಂಕ್‌ಆಫ್‌ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಂಡಿದ್ದು, ಹಲವು ವಿಶೇಷ ಸವಲತ್ತುಗಳೂ ಲಭಿಸಲಿವೆ. ಈ ಬಗ್ಗೆ ಅರಿವು ಮೂಡಿಸುವಂತೆ ಮತ್ತು ಬ್ಯಾಂಕ್ ಆಫ್ ಬರೋಡಾದಲ್ಲಿ ಸಂಬಳ ಖಾತೆ ತೆರೆಯಲು ಸೂಚಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

 

 

Share This Article
error: Content is protected !!
";