ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೆಳಗಾವಿ ಜಿಲ್ಲೆ ಯಮಕನ ಮರಡಿಯ ಹುದಲಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ
ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಟ್ಟಾರೆ 3,000 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆಗೆ ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಜಾರಿಗೊಳಿಸುವ ನೂತನ ಯೋಜನೆಗೆ ಚಾಲನೆ ನೀಡಿ, ಶುಭ ಹಾರೈಸಿದರು.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ವಿವಿಧ ಇಲಾಖೆಗಳ ಸಚಿವರುಗಳಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಈ ವೇಳೆ ಉಪಸ್ಥಿತರಿದ್ದರು.

