ಅನೈತಿಕ ಸಂಬಂಧಕ್ಕೆ ಅಡ್ಡಿ, ಕೊಲೆಯಲ್ಲಿ ಅಂತ್ಯ

News Desk

ಅನೈತಿಕ ಸಂಬಂಧಕ್ಕೆ ಅಡ್ಡಿ, ಕೊಲೆಯಲ್ಲಿ ಅಂತ್ಯ
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ನಾಪತ್ತೆ ಪ್ರಕರಣ ವ್ಯಕ್ತಿಯೊಬ್ಬನ ಕೊಲೆಯ ಕೇಸ್‌ಆಗಿ ಬಯಲಿಗೆ ಬಂದಿದೆ. ಪ್ರಕರಣವನ್ನು ಶಿರಾಳಕೊಪ್ಪ ಪೊಲೀಸ್‌ಠಾಣೆ ಪೊಲೀಸರು ಬೇಧಿಸಿದ್ದು, ಈ ಸಂಬಂಧ ಸುಮೊಟೋ ಕೇಸ್‌ದಾಖಲಿಸಿದ್ದಾರೆ.

ಶಿಕಾರಿಪುರ ತಾಲ್ಲೂಕು ನಾಗೀಹಳ್ಳಿ ಗ್ರಾಮದ ನಿವಾಸಿ ಕೃಷ್ಣಪ್ಪ ಕೊಲೆಯಾದವನು. ಈತನ ಮೃತದೇಹವನ್ನು ಛಿದ್ರ ಛಿದ್ರ ಮಾಡಿ ನದಿಗೆ ಎಸೆಯಲಾಗಿದೆ. ಪ್ರಕರಣದ ಸಂಬಂಧ ಶಿರಾಳಕೊಪ್ಪ ಪೊಲೀಸರು ಮೂವರ ವಿರುದ್ಧ ಎಫ್ ಐ ಆರ್ ಮಾಡಿದ್ದಾರೆ. ಕೊಲೆ, ಸಾಕ್ಷ್ಯ ನಾಶ, ಕ್ರಿಮಿನಲ್‌ಸಂಚು ಆರೋಪಗಳನ್ನು ಹೊರಿಸಲಾಗಿದೆ.

ಪ್ರಕರಣ ಬಯಲಿಗೆ ಬಂದಿದ್ದು ಹೇಗೆ ?
ಸೆಪ್ಟೆಂಬರ್‌- 7 ರಂದು ಈ ಘಟನೆ ನಡೆದಿದೆ. ಆದರೆ ಪ್ರಕರಣ ಬೆಳಕಿಗೆ ಬಂದಿದ್ದು, ನಾಪತ್ತೆ ಪ್ರಕರಣ ದಾಖಲಾದ ಬಳಿಕ. ನಾಗೀಹಳ್ಳಿ ನಿವಾಸಿ 33 ವರ್ಷದ ಕೃಷ್ಣಪ್ಪ ಎಂಬವರ ಪತ್ನಿ ಶಿರಾಳಕೊಪ್ಪ ಪೊಲೀಸ್‌ಠಾಣೆಗೆ ತಮ್ಮ ಪತಿ ಕಾಣೆಯಾಗಿರುವುದಾಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ಆರಂಭಿಸಿದ ಶಿರಾಳಕೊಪ್ಪ ಠಾಣೆ ಪೊಲೀಸರು ಕೃಷ್ಣಪ್ಪನ ಪತ್ನಿ ನೀಡಿದ ಸಂಶಯದ ಸುಳಿವನ್ನು ಆಧರಿಸಿ ನಾಗೀಹಳ್ಳಿ ಗ್ರಾಮದ ಕಿರಣನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃಷ್ಣಪ್ಪನ ಕೊಲೆಯ ರಹಸ್ಯ ಬಯಲಾಗಿದೆ.

ನಡೆದಿದ್ದು ಏನು ?
ಎಫ್‌ಐಆರ್‌ಪ್ರಕಾರ, ಕೃಷ್ಣಪ್ಪನ ಪತ್ನಿ ಜೊತೆ ಕಿರಣ್‌ಎಂಬಾತ ಅನೈತಿಕ ಸಂಬಂಧ ಹೊಂದಿದ್ದ ಎಂದು ದೂರಲಾಗಿದೆ. ಇದೇ ವಿಚಾರದಲ್ಲಿ ಕೃಷ್ಣಪ್ಪ ಕಿರಣನನ್ನು ಕರೆದು ಬೈದು ಎಚ್ಚರಿಕೆ ನೀಡಿದ್ದನಂತೆ. ಈ ಕಾರಣಕ್ಕೆ ಕೃಷ್ಣಪ್ಪನನ್ನೇ ಕೊಲೆ ಮಾಡಲು ನಿರ್ಧರಿಸಿದ ಕಿರಣ್ ತನ್ನಿಬ್ಬರು ಸ್ನೇಹಿತರಾದ ಪ್ರತಾಪ್‌ಹಾಗೂ ಗಣೇಶನ ಸಹಾಯ ಪಡೆದಿದ್ದಾನೆ. ಕೊಲೆಯ ಸ್ಕೆಚ್‌ರೂಪಿಸಿಕೊಂಡ ಕಿರಣ್, ಕಂದ್ಲಿ ಹಾಗೂ ಕುಡುಗೋಲು ಮತ್ತು ಪ್ಲಾಸ್ಟಿಕ್‌ಕೊಪ್ಪೆಗಳನ್ನು ಬೈಕ್‌ವೊಂದರ ಬ್ಯಾಗ್‌ನಲ್ಲಿ ಇರಿಸಿಕೊಂಡು ಕೊಲೆ ಮಾಡಲು ಮುಂದಾಗಿದ್ದಾನೆ.
ತನ್ನ ಸ್ನೇಹಿತರಾದ ಗಣೇಶ ಹಾಗೂ ಪ್ರತಾಪನ ಮೂಲಕ ಕೃಷ್ಣಪ್ಪನಿಗೆ ಬೇರೆ ಊರಿನಲ್ಲಿ ಚೆನ್ನಾಗಿ ಕುಡಿಸಿ ತಡರಾತ್ರಿ ಗ್ರಾಮಕ್ಕೆ ವಾಪಸ್‌ಕರೆ ತರುವಂತೆ ಹೇಳಿದ್ದಾನೆ. ಆತನ ಸ್ನೇಹಿತರು ಸಹ ಕಿರಣನ ಪ್ಲಾನಿನಂತೆ ಕೃಷ್ಣಪ್ಪನಿಗೆ ಚೆನ್ನಾಗಿ ಕುಡಿಸಿ ನಾಗೀಹಳ್ಳಿ ಕ್ರಾಸ್‌ಬಳಿಗೆ ಕರೆತಂದಿದ್ದಾರೆ. ಅಲ್ಲಿಗೆ ಬಂದ ಕಿರಣ್ ಕೃಷ್ಣಪ್ಪನಿಗೆ ಹೊಡೆದು, ಬೈದು ನಂತರ ಕುಡುಗೋಲಿನಿಂದ ಕುತ್ತಿಗೆಗೆ ಏಟು ಕೊಟ್ಟಿದ್ದಾನೆ. ಆ ಬಳಿಕ ಅಲ್ಲಿಯೇ ಇದ್ದ ಗುಂಡಿಯೊಂದಕ್ಕೆ ಕೃಷ್ಣಪ್ಪನನ್ನು ಶಿಫ್ಟ್‌ಮಾಡಿ ಆತನ ಅಂಗಾಂಗಗಳನ್ನು ಕತ್ತರಿಸಿ ಎರಡು ಪ್ಲಾಸ್ಟಿಕ್‌ಚೀಲಗಳಿಗೆ ತುಂಬಿಕೊಂಡಿದ್ದಾರೆ. ಬಳಿಕ ಗಣೇಶ ಹಾಗೂ ಕಿರಣ್ ಒಂದು, ಪ್ರತಾಪ ಇನ್ನೊಂದು ಶವದ ಚೀಲವನ್ನು ಹಿಡಿದು ಕೊರಟೆಗೆರೆ, ಚಿಕ್ಕೇರೂರು, ಬಾರಂಗಿ ಮೂಲಕ ಗೋಂದಿ ಬ್ರಿಡ್ಜ್‌ಬಳಿಗೆ ತೆರಳಿದ್ದಾರೆ. ಅಲ್ಲಿ ನದಿಗೆ ಎರಡು ಚೀಲದಲ್ಲಿದ್ದ ಕೃ‍ಷ್ಣಪ್ಪನ ಅಂಗಾಂಗಗಳನ್ನು ಎಸೆದು ಪರಾರಿ ಆಗಿದ್ದಾರೆ.

- Advertisement -  - Advertisement -  - Advertisement - 
Share This Article
error: Content is protected !!
";