ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಯನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 27 ಕೊನೆಯ ದಿನ.
ಚಿತ್ರದುರ್ಗ ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಮಾಸಿಕ ರೂ.27,100ಗಳನ್ನು ನಿಗಧಿಪಡಿಸಿದ್ದು, ಬಿ.ಇ, ಬಿ.ಟೆಕ್, ಬಿಸಿಎ–ಕಂಪ್ಯೂಟರ್ ವಿಜ್ಞಾನ, ಮಾಹಿತಿ ವಿಜ್ಞಾನ, ಇಂಜಿನಿಯರಿಂಗ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಟೆಲಿಕಾಂ ವಿಷಯದಲ್ಲಿ ಪದವಿ ಪಡೆದಿರಬೇಕು.
ಈ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಇದೇ ಮಾರ್ಚ್ 27ರ ಸಂಜೆ 4 ಗಂಟೆಯೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಜಿಲ್ಲೆ ಇಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಖುದ್ದು ಹಾಜರಾಗಿ ಪತ್ರಾಂಕಿತ ಕಚೇರಿ ಸಹಾಯಕರು, ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಜಿಲ್ಲೆ ಅವರಿಗೆ ಮುದ್ದಾಂ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.