6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ವಿಜಯನಗರ(ಹೊಸಪೇಟೆ):
2025-26
ನೇ ಸಾಲಿಗೆ ಪರಿಶಿಷ್ಟ ಪಂಗಡದ (ಎಸ್ಟಿ) ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ.ರವಿಕುಮಾರ್ ತಿಳಿಸಿದ್ದಾರೆ.

ಪ್ರವೇಶ ಬಯಸುವ ವಿದ್ಯಾರ್ಥಿಗಳು ಅರ್ಜಿಗಳನ್ನು .19 ರಿಂದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹೊಸಪೇಟೆ, ಕೂಡ್ಲಿಗಿ, ಹರಪನಹಳ್ಳಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ಮತ್ತು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪಡೆಯಬಹುದು.

ಅರ್ಜಿ ಸಲ್ಲಿಸಲು ಮೇ.3 ರಂದು ಕೊನೆಯ ದಿನವಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಮೂಲ ದಾಖಲಾತಿಗಳೊಂದಿಗೆ ಕಚೇರಿಯ ವೇಳೆಯಲ್ಲಿ ಆಯಾ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯ ಕಚೇರಿಗಳಲ್ಲಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಶೇ.60 ರಷ್ಟು ಅಂಕ ಪಡೆದು ಉತ್ತಿರ್ಣರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಒಳಗಿರಬೇಕು. ಹೆಚ್ಚಿನ ಮಾಹಿತಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹೊಸಪೇಟೆ ಮೊ.9742423530, ಕೂಡ್ಲಿಗಿ ಮೊ.7022223200, ಹರಪನಹಳ್ಳಿ ಮೊ.7899465098, ಹಡಗಲಿ ಮೊ.9901980762, ಹಗರಿಬೊಮ್ಮನಹಳ್ಳಿ ಮೊ.9901980762 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";